Connect with us

ಹವಾಮಾನ

ಇಂದು ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ.!

Published

on

 ಹವಾಮಾನ ಇಲಾಖೆಯ ವರದಿಯ ಪ್ರಕಾರ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಹಳದಿ ಎಚ್ಚರಿಕೆ (Yellow Alert) ನೀಡಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ತಾಪಮಾನದಲ್ಲಿಯೂ ಸ್ವಲ್ಪ ಮಟ್ಟಿನ ಇಳಿಕೆಯಾಗಿದ್ದು, ಚಳಿಯ ಅನುಭವವಾಗುತ್ತಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ರಾಜ್ಯದ ಹಲವೆಡೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಸಾರ್ವಜನಿಕರು ಹವಾಮಾನ ಬದಲಾವಣೆಗೆ ಅನುಗುಣವಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಕೋರಲಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement