Connect with us

ಹವಾಮಾನ

ರೈನ್ ALERT : ಚಂಡಮಾರುತದ ಭೀತಿ : ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ.!*

Published

on

ಭಾರತೀಯ ಹವಾಮಾನ ಇಲಾಖೆ (IMD) ದೇಶದ ಹಲವು ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳ ಕಾಲ ತೀವ್ರ ಹವಾಮಾನ ವೈಪರೀತ್ಯ ಉಂಟಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕಾಶ್ಮೀರದಿಂದ ಪಶ್ಚಿಮ ಬಂಗಾಳದವರೆಗೆ ಗುಡುಗು ಸಹಿತ ಭಾರೀ ಮಳೆ, ಆಲಿಕಲ್ಲು ಮಳೆ ಮತ್ತು ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹೈ ಅಲರ್ಟ್ ಘೋಷಿಸಲಾಗಿದೆ.
ಚಂಡಮಾರುತದ ಭೀತಿ: ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 48 ಗಂಟೆಗಳಲ್ಲಿ ಚಂಡಮಾರುತದ ಪರಿಣಾಮ ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ಉತ್ತರ ಭಾರತದ ಹಲವು ರಾಜ್ಯಗಳಲ್ಲಿ, ವಿಶೇಷವಾಗಿ ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಹಿಮಪಾತ ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಭಾರತದ ಮೇಲೆ ಚಂಡಮಾರುತದ ಭೀತಿ : ಕರಾವಳಿಯುದ್ದಕ್ಕೂ ಭಾರೀ ಮಳೆ ಮುನ್ಸೂಚನೆ
ದಕ್ಷಿಣ ಭಾರತದ ರಾಜ್ಯಗಳಲ್ಲಿ ಚಂಡಮಾರುತದ ಪರಿಚಲನೆ (Cyclonic Circulation) ತೀವ್ರಗೊಂಡಿದ್ದು, ಹವಾಮಾನದಲ್ಲಿ ಭಾರಿ ಏರುಪೇರಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಬಂಗಾಳ ಮತ್ತು ಒಡಿಶಾದಲ್ಲಿ ಹೈ ಅಲರ್ಟ್: ಪೂರ್ವ ಭಾರತದ ಪಶ್ಚಿಮ ಬಂಗಾಳ, ಬಿಹಾರ ಮತ್ತು ಒಡಿಶಾದಲ್ಲಿ ತೀವ್ರ ಗಾಳಿ (ಗಂಟೆಗೆ 40-50 ಕಿ.ಮೀ ವೇಗ) ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಈ ಕೆಳಗಿನ ಪ್ರದೇಶಗಳಲ್ಲಿ ಹೆಚ್ಚಿನ ಜಾಗರೂಕತೆ ವಹಿಸುವಂತೆ ಸೂಚಿಸಲಾಗಿದೆ:

ಉತ್ತರ ಭಾರತ: ಜಮ್ಮು-ಕಾಶ್ಮೀರ, ಲಡಾಖ್, ಪಂಜಾಬ್, ಹರಿಯಾಣ ಮತ್ತು ದೆಹಲಿ.
ಪೂರ್ವ ಭಾರತ: ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ ಮತ್ತು ಬಿಹಾರ.
ಈಶಾನ್ಯ ಭಾರತ: ಅಸ್ಸಾಂ ಮತ್ತು ಮೇಘಾಲಯದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement