Published
1 week agoon
By
Akkare News
ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರಾ ಮಹೋತ್ಸವ ಹಿನ್ನಲೆ ಬ್ರಹ್ಮರಥೋತ್ಸವವು ಏ.17ರಂದು ಜರುಗಲಿದ್ದು, ಪುತ್ತೂರು ಆಸುಪಾಸಿನ ಗ್ರಾಮಾಂತರ ಪ್ರದೇಶಗಳಿಂದ ಆಗಮಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಸಾರ್ವಜನಿಕ ಪ್ರಯಾಣಿಕರು ವಿಶೇಷ ಸಾರಿಗೆ ವ್ಯವಸ್ಥೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕ.ರಾ.ರ.ಸಾ.ನಿಗಮ ಪುತ್ತೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.