Connect with us

ಇತರ

ಪುತ್ತೂರು ಜಾತ್ರೆ ಹಿನ್ನಲೆ : ಎ 17-18 ರಂದು ಮದ್ಯ ಮಾರಾಟ ನಿಷೇಧ, ವಾಹನ ಸಂಚಾರ ಮಾರ್ಗದಲ್ಲೂ ಬದಲಾವಣೆ ಮಾಡಿ ಡೀಸಿ ಆದೇಶ

Published

on

ಪುತ್ತೂರು,  : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭೇಟಿ, ಕೆರೆ ಉತ್ಸವ, ತೆಪೆÇಪೀತ್ಸವ ಹಾಗೂ ಎಪ್ರಿಲ್ 17 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮ ಮತ್ತು ಎಪ್ರಿಲ್ 18 ರಂದು ದೇವರು ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ಹೋಗಲಿದ್ದು, ಈ ವೇಳೆ ಸಾವಿರಾರು ಜನ ಭಕ್ತಾದಿಗಳು ಸೇರುವ ನಿರೀಕ್ಷೆಯಿರುತ್ತದೆ.

      ಪುತ್ತೂರು ಪರಿಸರವು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಎ.ವಿ ಆದೇಶಿಸಿದ್ದಾರೆ.

ಸಂಚಾರ ಮಾರ್ಗ ಬದಲಾವಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರದ ಆಗಮನದ ದಿನ ಮತ್ತು ಎಪ್ರಿಲ್ 17 ರಂದು ಬ್ರಹ್ಮರಥೋತ್ಸವ ನಡೆಯಲಿರುವುದರಿಂದ ನಿಗದಿತ ದಿನದಂದು ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಜೆ 4 ಗಂಟೆಯ ನಂತರ ಸಂಚಾರ ಮಾರ್ಗ ಬದಲಾವಣೆ ಮಾಡಿ  ಜಿಲ್ಲಾಧಿಕಾರಿ  ದರ್ಶನ್ ಎಚ್.ವಿ ಆದೇಶಿಸಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement