Published
1 day agoon
By
Akkare News
ಬೆಂಗಳೂರು,: ಇನ್ಸ್ಪೆಕ್ಟರ್ ಬಳಿಯೇ ಲಂಚ ಸ್ವೀಕರಿಸುವಾಗ ಎಸ್ಡಿಎ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ನೊಂದೆಡೆ ಬೆಂಗಳೂರಿನ ಹೆಬ್ಬಾಳದ ಪಶುಸಂಗೋಪನೆ ಇಲಾಖೆ ಆಯುಕ್ತರ ಕಚೇರಿಯ ಎಸ್ಡಿಎ ಸಹ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಲಾಖಾ ತನಿಖೆಯ ಅಂತಿಮ ಆದೇಶ ಪ್ರಕ್ರಿಯೆ ಕಾರ್ಯಗತಗೊಳಿಸಲು ಪಶುಸಂಗೋಪನೆ ಇಲಾಖೆ ಆಯುಕ್ತರ ಕಚೇರಿಯ ಎಸ್ಡಿಎ ಮುದಾಸಿರ್ ಎನ್ನುವರು ವಿಜಯಪುರ ಜಿಲ್ಲೆಯ ಪಶುಸಂಗೋಪನೆ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅದರಂತೆ 10 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರೆ. ಸದ್ಯ ಮುದಾಸಿರ್ನನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರಿಂದ ವಿಚಾರಣೆ ನಡೆಸಿದ್ದಾರೆ.


‘

‘




