Connect with us

ಇತರ

ಗರುಡ ಗ್ಯಾಂಗ್ ಮೇಲೆ ಕಟ್ಟೆಚ್ಚರ: ಗ್ಯಾಂಗ್‌ನ ಸದಸ್ಯನ ಮೇಲೆ ಗೂಂಡಾ ಕಾಯ್ದೆ ಪ್ರಯೋಗ

Published

on

ಉಡುಪಿ: ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದಿಸೆಯಲ್ಲಿ ಉಡುಪಿ ಜಿಲ್ಲಾಡಳಿತ ಮಹತ್ವದ ಹೆಜ್ಜೆ ಇಟ್ಟಿದ್ದು, ಬೈಂದೂರು ಪೊಲೀಸ್ ಠಾಣೆಯ ರೌಡಿ ಶೀಟರ್ ಹಾಗೂ ಕುಖ್ಯಾತ “ಗರುಡ ಗ್ಯಾಂಗ್‌”ನ ಸಕ್ರೀಯ ಸದಸ್ಯ ಮಹಮ್ಮದ್‌ ಅಲ್ಫಾಜ್‌ (25) ವಿರುದ್ಧ ಗೂಂಡಾ ಕಾಯ್ದೆಯಡಿ ಅರೆಸ್ಟ್ ಮಾಡಲಾಗಿದೆ.

 

ಆರೋಪಿಯ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಾದ ಶಿರ್ವಾ, ಗಂಗೊಳ್ಳಿ, ಬೈಂದೂರು, ಉಡುಪಿ ನಗರ, ಕುಂದಾಪುರ ಗ್ರಾಮಾಂತರ ಮತ್ತು ಕುಂದಾಪುರ ನಗರ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲೂ ಪ್ರಕರಣವಿರುವುದು ದಾಖಲಾಗಿದೆ. ಒಟ್ಟು 10 ಪ್ರಕರಣಗಳಲ್ಲಿ 2 ಕೊಲೆಯತ್ನ, 1 ದರೋಡೆ, 1 ದರೋಡೆ ಯತ್ನ, 1 ಹಲ್ಲೆ, 2 ಅಕ್ರಮ ಕೂಟ, 1 ಅಪಹರಣ, 1 ಮಾದಕ ವಸ್ತು ಮಾರಾಟ ಹಾಗೂ 1 ಇತರೆ ಪ್ರಕರಣಗಳು ಸೇರಿವೆ. ಈ ಪೈಕಿ ಒಂದು ಪ್ರಕರಣ ಖುಲಾಸೆಯಾಗಿದ್ದು, 8 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದ್ದು, ಇನ್ನೊಂದು ಪ್ರಕರಣ ತನಿಖೆಯಲ್ಲಿದೆ.

 

ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿದ ವಿವರವಾದ ವರದಿಯನ್ನು ಪರಿಗಣಿಸಿದ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳು ಏಪ್ರಿಲ್ 24ರಂದು ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ, ಆರೋಪಿಯನ್ನು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ನಿರ್ಬಂಧಿತ ಬಂಧನದಲ್ಲಿರಿಸಲು ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement