Connect with us

ಇಂದಿನ ಕಾರ್ಯಕ್ರಮ

ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ ಪುತ್ತೂರಿನಿಂದ 8 ಮಂದಿ‌ ಅವಿರೋಧ ಆಯ್ಕೆ

Published

on

ಪುತ್ತೂರು : ಬಂಟರ ಯಾನೆ ನಾಡವರ ಮಾತೃ ಸಂಘ ಕ್ಕೆ ಪುತ್ತೂರು ತಾಲೂಕಿನಿಂದ 8 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 

ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಮಾಜಿ ಅಧ್ಯಕ್ಷ ದಯಾನಂದ ರೈ ಮನವಳಿಕೆಗುತ್ತು, ಬಂಟರ ಸಂಘದ ನಿರ್ದೇಶಕ ದಂಬೆಕ್ಕಾನ ಸದಾಶಿವ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ಹಾಲಿ ಸಹ ಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ಹಾಲಿ ನಿರ್ದೇಶಕ ಜಯಪ್ರಕಾಶ್ ರೈ ನೂಜಿಬೈಲು, ತಾಲೂಕು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಉದ್ಯಮಿ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ ಹಾಗೂ ಮಹಿಳಾ ಕ್ಷೇತ್ರದಿಂದ ವತ್ಸಲಾ ಪಿ ಶೆಟ್ಟಿ ಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷ ಸವಣೂರು ಸೀತಾರಾಮ ರೈ ಹಾಗೂ ನಿರ್ದೇಶಕ ರವಿಪ್ರಸಾದ್ ಶೆಟ್ಟಿ ಬನ್ನೂರು ಅವರು ಮಾತೃ ಸಂಘದ ಚುನಾವಣೆಗೆ ನಾಮಪತ್ರ ಹಿಂತೆಗೆದ ಕಾರಣ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಮಾತೃ ಸಂಘದ ಪ್ರಕಟನೆ ತಿಳಿಸಿದೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement