Connect with us

ಉದ್ಯೋಗ

ಉದ್ಯೋಗ ಆಸಕ್ತರಿಗೆ ಸರಕಾರದಿಂದ ಗುಡ್ ನ್ಯೂಸ್ 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಚಾಲನೆ; ಒಳಮೀಸಲಾತಿ ಜಾರಿಗೊಳಿಸಿ ಕರ್ನಾಟಕ ಸರ್ಕಾರ ಮಹತ್ವದ ಆದೇಶ

Published

on

ಬೆಂಗಳೂರು: ದಶಕಗಳ ಕಾಲದ ಹೋರಾಟ ಮತ್ತು ಕಾನೂನು ಸವಾಲುಗಳ ನಂತರ, ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ (SC) ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಮಾನವೊಂದನ್ನು ತೆಗೆದುಕೊಂಡಿದೆ. ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ಸರ್ಕಾರ, ಮಾನ್ಯ ಉಚ್ಚ ನ್ಯಾಯಾಲಯದ ಆದೇಶಕ್ಕೆ ಒಳಪಟ್ಟು ಹೊಸ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲು ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,432 ಸರ್ಕಾರಿ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣದಿಂದಲೇ ಆರಂಭಿಸಲು ಹಸಿರು ನಿಶಾನೆ ತೋರಿಸಲಾಗಿದೆ. ಈ ಮೂಲಕ ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ.   ಹೊಸ ಮೀಸಲಾತಿ ಸೂತ್ರ ನ್ಯಾಯಾಲಯ ವಿಧಿಸಿರುವ ಶೇ. 50ರ ಒಟ್ಟು ಮೀಸಲಾತಿ ಮಿತಿಯನ್ನು ಮೀರದಂತೆ ಸರ್ಕಾರವು ಈ ಹೊಸ ಮಾದರಿಯನ್ನು ರೂಪಿಸಿದೆ. ಪರಿಶಿಷ್ಟ ಜಾತಿಗೆ ನಿಗದಿಪಡಿಸಿರುವ ಒಟ್ಟು ಶೇ. 15ರಷ್ಟು ಮೀಸಲಾತಿಯನ್ನು ಮೂರು ಪ್ರಮುಖ ಪ್ರವರ್ಗಗಳಾಗಿ ಹಂಚಿಕೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಪ್ರವರ್ಗ-ಎ (SC ಎಡಗೈ ಸಮುದಾಯಗಳು): ಈ ವರ್ಗಕ್ಕೆ ಶೇ. 5.25 ರಷ್ಟು ಒಳಮೀಸಲಾತಿಯನ್ನು ನೀಡಲಾಗಿದೆ. ದಶಕಗಳಿಂದ ಶೈಕ್ಷಣಿಕ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಹಿಂದುಳಿದಿದ್ದ ಈ ಸಮುದಾಯಕ್ಕೆ ಇದು ದೊಡ್ಡ ಮಟ್ಟದ ಬಲ ತುಂಬಲಿದೆ. ಪ್ರವರ್ಗ- ಬಿ (SC ಬಲಗೈ-ಹೊಲೆಯ ಮತ್ತು ಇತರ ಸಮುದಾಯಗಳು): ಈ ವರ್ಗಕ್ಕೂ ಸಹ ಸಮಾನವಾಗಿ ಶೇ. 5.25 ರಷ್ಟು ಮೀಸಲಾತಿಯನ್ನು ಹಂಚಿಕೆ ಮಾಡಲಾಗಿದೆ. ಪ್ರವರ್ಗ- ಸಿ: ಭೋವಿ, ಲಂಬಾಣಿ, ಕೊರಚ, ಕೊರಮ ಸೇರಿದಂತೆ ಇತರ ಸಮುದಾಯಗಳಿಗೆ ಶೇ. 4.5 ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ವಿಶೇಷವೆಂದರೆ, ಈ ಪ್ರವರ್ಗಕ್ಕೆ ಲಭ್ಯವಾಗುವ ಒಟ್ಟು ಹುದ್ದೆಗಳಲ್ಲಿ ಶೇ. 20ರಷ್ಟು ಭಾಗವನ್ನು (ಅಂದರೆ ಪ್ರತಿ 5 ಹುದ್ದೆಗಳಲ್ಲಿ 1 ಹುದ್ದೆ) ಪರಿಶಿಷ್ಟ ಜಾತಿಯಲ್ಲಿರುವ 59 ಅತ್ಯಂತ ಹಿಂದುಳಿದ ಅಲೆಮಾರಿ ಜಾತಿಗಳಿಗೆ ಮೀಸಲಿಡಲು ಆದೇಶಿಸಲಾಗಿದೆ.   ‘

Continue Reading
Click to comment

Leave a Reply

Your email address will not be published. Required fields are marked *

Advertisement