Connect with us

ಇತ್ತೀಚಿನ ಸುದ್ದಿಗಳು

ಬಿಸಿಲಿಗೆ ಬೆಂದು ಹೋಗಿದ್ದ ಬೆಂಗಳೂರು ತಂಪೆರೆದ ವರುಣ! ಸಿಲಿಕಾನ್ ಸಿಟಿಯಲ್ಲಿ ಗುಡುಗು ಬಿರುಗಾಳಿ ಸಹಿತ ಭಾರೀ ಮಳೆ

Published

on

ಹತ್ತು ಹಲವು ದಿನಗಳಿಂದ ಬಿಸಿಲ ಬೇಗೆಯಿಂದ ಬಳಲಿದ ರಾಜ್ಯ ರಾಜಧಾನಿ ಬೆಂಗಳೂರಿನ ಜನರಿಗೆ ಬುಧವಾರ ಸಂಜೆ ಸುರಿದ ಗಾಳಿ, ಗುಡುಗು ಸಹಿತ ಸುರಿದ ಭಾರೀ ಮಳೆ ಸಂತಸ ಮೂಡಿಸಿದೆ. ಸಂಜೆಯಾಗುತ್ತಿದ್ದಂತೆಯೇ ಬೆಂಗಳೂರಿನ ಹಲವೆಡೆ ಮಳೆರಾಯ ಎಂಟ್ರಿ ಕೊಟ್ಟು ತಂಪೆರೆದಿದ್ದು, ಜನರನ್ನು ಒಂದಿಷ್ಟು ನಿಟ್ಟುಸಿರು ಬಿಡುವಂತೆ ಮಾಡಿತು. ಬೆಂಗಳೂರಿನ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೋರಮಂಗಲ, ಮೆಜೆಸ್ಟಿಕ್, ಮಾರ್ಕೆಟ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ವಾಹನ ಸವಾರರು ರಸ್ತೆಯಲ್ಲಿ ಸಿಲುಕಿ ಪರದಾಡುವಂತಾಗಿದೆ.
. ಬೆಂಗಳೂರಿಗೆ ಮುಂದಿನ ಮೂರು ಗಂಟೆಗಳ ಕಾಲ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ.   ‘

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version