Published
2 hours agoon
By
Akkare News
ಸಂಪರ್ಕ ಸೇತುವೆಯಾಗಲಿದೆ
ಸಿರಿಯ ನದಿ ಕೇರಳ ಹಾಗೂ ಕರ್ನಾಟಕದ ಸಂಪರ್ಕ ಸೇತುವಾಗಲಿದೆ. ಕರ್ನಾಟಕಕ್ಕೆ ಸೇರಿದ ಮಾಣಿಲ, ವಿಟ್ಲ ಭಾಗದ ಜನರು ನದಿಯ ಆಚೆ ದಡದಲ್ಲಿರುವ ಗ್ರಾಮಕ್ಕೆ ಭೇಟಿಯಾಗಬೇಕಾದಲ್ಲಿ ೨೮ ಕಿ ಮೀ ಕ್ರಯಿಸಬೇಕಿತ್ತು. ಮಾಣಿಲದಿಂದ ಕಾಸರಗೋಡು ಜಿಲ್ಲೆಯ ಪೆರ್ಲಕ್ಕೆ ಅತೀ ಹತ್ತಿರವಿದೆ ಆದರೆ ದಾರಿ ಮಾತ್ರ ದೂರವಾಗಿತ್ತು. ಇಲ್ಲಿನ ನದಿಗೆ ಸೇತುವೆ ನಿರ್ಮಾಣ ಮಾಡಿ ಎಂದು ಎರಡೂ ರಾಜ್ಯದ ಜನತೆ ಯಾರಿಗೆಲ್ಲಾ ಮನವಿ ಕೊಡಬೇಕೋ ಅವರನ್ನೆಲ್ಲಾ ಹುಡುಕಿ ಮನವಿಯನ್ನು ನೀಡಿ ಸೇತುವೆಯ ನಿರ್ಮಾಣಕ್ಕೆ ಸಹಕರಿಸಿ ಎಂದು ಕಳೆದ ೩೦ ವರ್ಷಗಳಿಂದ ಮನವಿ ಮಾಡುತ್ತಲೇ ಇದ್ದಾರೆ. ಈ ವರ್ಷ ಆಗಬಹುದು , ಮುಂದಿನ ವರ್ಷ ಆಗಬಹುದು, ಅವರು ಖಂಡಿತಾ ಮಾಡಿಯೇ ಮಾಡುತ್ತಾರೆ ಎಂದು ನಂಬಿದ್ದ ಜನತೆಗೆ ತಮ್ಮ ಬೇಡಿಕೆ ಈಡೇರಿಸಲು ಸಾಧ್ಯವೇ ಆಗಿರಲಿಲ್ಲ. ಇಲ್ಲಿ ಸೇತುವೆ ನಿರ್ಮಾಣಕ್ಕೆ ಇಚ್ಚಾಶಕ್ತಿಯ ಕೊರತೆಯೇ ಎದ್ದು ಕಾಣುತ್ತಿತ್ತು.

‘ ಅಶೋಕ್ ರೈ ಅವರು ಚುನಾವಣೆಯಲ್ಲಿ ಗೆದ್ದ ಕೆಲವೇ ತಿಂಗಳಲ್ಲಿ ಸಿರಿಯ ನದಿಗೆ ಸೇತುವೆ ನಿರ್ಮಾಣ ಮಾಡುವ ಬಗ್ಗೆ ಹಾಗೂ ಇದರ ಸಾಧಕ ಬಾಧಕಗಳ ಬಗ್ಗೆ ಸರ್ವೆಯನ್ನು ಮಾಡಿಸಿದ್ದರು. ಸೇತುವೆ ನಿರ್ಮಾಣ ಖಂಡಿತಾ ಮಾಡುತ್ತೇನೆ ಎಂದು ಶಾಸಕರಾದ ಬಳಿಕ ಮತ್ತೆ ಭರವಸೆ ನೀಡಿದ್ದರು. ಶಾಸಕರಾಗಿ ಎರಡು ವರ್ಷ ಕಳೆದ ಸಂದರ್ಭದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಸರಕಾರದ ಮೇಲೆ ಒತ್ತಡ ಹಾಕಿ ೨೦ ಕೋಟಿ ಮಂಜೂರು ಮಾಡಿಸಿದ್ದಾರೆ.
ಸಚಿವರನ್ನು ಕರೆದುಕೊಂಡು ಬಂದಿದ್ದ ಅಶೋಕ್ ರೈ
ಕಳೆದ ಮಾ. ೨೮ ರಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಮಾಣಿಲಕ್ಕೆ ಕರೆದುಕೊಂಡು ಬಂದಿದ್ದ ಶಾಸಕ ಅಶೋಕ್ ರೈ, ಸೇತುವೆ ನಿರ್ಮಾಣವಾಗಬೇಕಿದ್ದ ಜಾಗವನ್ನು ಪರಿಶೀಲನೆ ಮಾಡಿಸಿದ್ದರು. ಸ್ಥಳ ವೀಕ್ಷಣೆ ಮಾಡಿದ ಸಚಿವರು ಇಲ್ಲಿ ಸೇತುವೆಯ ಅಗತ್ಯವಿದೆ, ಕೇರಳ ಸರಕಾರ ಇಲ್ಲಿ ಸೇತುವೆ ನಿರ್ಮಾಣ ಮಾಡುವುದಿಲ್ಲ, ಕರ್ನಾಟಕ ಸರಕಾರವೇ ಇಲ್ಲಿ ಸೇತುವೆ ನಿರ್ಮಾಣ ಮಾಡಬೇಕಿದೆ, ನದಿ ಕರ್ನಾಟಕ ಜಾಗದಲ್ಲಿ ಇರುವ ಕಾರಣ ನಾವೇ ಏನಾದರೂ ಮಾಡಬೇಕು ಎಂದು ತಿಳಿಸಿದ್ದ ಸಚಿವರು ಈ ಬಗ್ಗೆ ಸರ್ವೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆಯನ್ನು ನೀಡಿದ್ದರು. ಮಾ. ೨೮ ರಂದು ಭೇಟಿ ನೀಡಿ ಮಾತುಕೊಟ್ಟಿದ್ದ ಸಚಿವರು ಎಪ್ರಿಲ್ ೨೯ ಕ್ಕೆ ೨೦ ಕೋಟಿ ಅನುದಾನಕ್ಕೆ ಒಪ್ಪಿಗೆ ನೀಡಿ ಅನುದಾನ ಮಂಜೂರುಗೊಳಿಸಿದ್ದಾರೆ.