Connect with us

ಇತ್ತೀಚಿನ ಸುದ್ದಿಗಳು

ಬಿಗ್ ಬ್ರೋಕಿಂಗ್ ನ್ಯೂಸ್ ವರುಣನ ಆರ್ಭಟಕ್ಕೆ ಬೋರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ಏಳು ಮಂದಿ ಬಲಿ

Published

on

ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರಾಗಿದ್ದು, ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ದಿಢೀರ್ ಕುಸಿದು ಬಿದ್ದಿದೆ. ಮೂವರು ಮಕ್ಕಳು ಸಹಿತ ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಮಳೆಯ ರಭಸಕ್ಕೆ ಬೌರಿಂಗ್ ಆಸ್ಪತ್ರೆಯ ತುರ್ತು ಅಪಘಾತ ವಿಭಾಗದ ಗೇಟ್ ಬಳಿ ಇರುವ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಸ್ಥಳೀಯರು ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ತಕ್ಷಣವೇ ಧಾವಿಸಿದ್ದು, ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ.
ಮಳೆ ಸುರಿಯುತ್ತಲೇ ಇರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಜೆಸಿಬಿ ಮೂಲಕ ಗೋಡೆಯ ಅವಶೇಷಗಳನ್ನು ತೆರವುಗೊಳಿಸಿ, ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ. ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.   ‘

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version