Published
2 hours agoon
By
Akkare News
ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಹಗಲಿನ ವೇಳೆ ತಾಪಮಾನ 36-38 ಡಿಗ್ರಿ ಸೆಲ್ಸಿಯಸ್ವರೆಗೆ ತಲುಪಲಿದೆ. ಹಾಗೆಯೇ ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಧಾರವಾಡ ಭಾಗದಲ್ಲಿ ಒಳ ಮತ್ತು ಬಿಸಿ ಹವೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. 
‘ ಎಲ್ಲೆಲ್ಲಿ ಮಳೆ? ದಕ್ಷಿಣ ಒಳನಾಡು ಕರ್ನಾಟಕ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ವಿಶೇಷವಾಗಿ ಸಂಜೆ ವೇಳೆ ಕೆಲವೆಡೆ ಗಾಳಿಯೊಂದಿಗೆ ಲಘು ಅಥವಾ ಮಧ್ಯಮ ಪ್ರಮಾಣದ ಮಳೆ ಸಾಧ್ಯತೆ ಇದೆ. ಗುಡುಗು ಸಹಿತ ಮಳೆಯ ಸಂಭವವೂ ಇದೆ ಎನ್ನಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಹಗಲಿನ ವೇಳೆ ಕನಿಷ್ಠ 24ರಿಂದ ಗರಿಷ್ಠ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆಯಾದರೂ, ಸಂಜೆ ಅಥವಾ ರಾತ್ರಿ ವೇಳೆಗೆ ಸಾಮಾನ್ಯ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.



