Connect with us

ನಿಧನ

ಕ್ಯಾನ್ಸರ್ ವಿರುದ್ಧದ ಹೋರಾಟ ಅಂತ್ಯ: ದಕ್ಷ ಪೊಲೀಸ್ ಅಧಿಕಾರಿ ಎಸ್ಪಿ ಲಾವಣ್ಯ ಇನ್ನಿಲ್ಲ…

Published

on

ಬೆಂಗಳೂರು: ನಾಡಿನ ದಕ್ಷ ಮತ್ತು ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳಲ್ಲಿ ಒಬ್ಬರಾಗಿದ್ದ ಎಸ್ಪಿ ಬಿ.ಎನ್. ಲಾವಣ್ಯ (40) ಅವರು ಇಂದು ವಿಧಿವಶರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮಧ್ಯಾಹ್ನ ಸುಮಾರು 2:30ಕ್ಕೆ ಕೊನೆಯುಸಿರೆಳೆದರು. ವೃತ್ತಿ ಬದುಕಿನ ಹಾದಿ: ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗ್ರಾಮದವರಾದ ಲಾವಣ್ಯ ಅವರು ಪೊಲೀಸ್ ಇಲಾಖೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದರು.
ಇವರು ಮಂಡ್ಯ ಮತ್ತು ಬಳ್ಳಾರಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ (Addl. SP) ಆಗಿ ಸೇವೆ ಸಲ್ಲಿಸಿದ್ದರು. ಬೆಂಗಳೂರಿನಲ್ಲಿ ಇಂಟಲಿಜೆನ್ಸ್ ಮತ್ತು ಡಿಸಿಆರ್‌ಇ ವಿಭಾಗದಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಬೆಸ್ಕಾಂ ವಿಜಿಲೆನ್ಸ್ ವಿಭಾಗದಲ್ಲಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.   ‘

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version