ಸವಣೂರು: ಕಾಣಿಯೂರು-ಮಂಜೇಶ್ವರ ಅಂತಾರಾಜ್ಯ ರಸ್ತೆಯ ಸವಣೂರಿನ ಮುಂದಿನ ತಿರುವಿನಲ್ಲಿ ದ್ವಿಚಕ್ರ ವಾಹನ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಯುವಕನನ್ನು ಮಿತ್ತೂರು ಮೂಲದವರು ಎಂದು ಹೇಳಲಾಗುತ್ತಿದ್ದು, ಇನ್ನೋರ್ವ ಸವಾರ ಗಂಭೀರ ಗಾಯ ಗೊಂಡ ವ್ಯಕ್ತಿ ಮೃತಪಟ್ಟಬಗ್ಗೆ ವರದಿಯಾಗಿದೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.