Connect with us

ಕ್ರೈಮ್ ನ್ಯೂಸ್

ಉಂಡಾ ಮನೆಗೆ ಖನ್ನ ಇಟ್ಟ ಖದೀಮರು.. ಸಚಿವ ಜಮೀರ್ ಮನೆಗೇ ಖನ್ನ ಹಾಕಿ 1.13 ಕೋಟಿ ರೂ ಮೌಲ್ಯದ ಚಿನ್ನಾಭರಣ ಕದ್ದ ಇಬ್ಬರ ಬಂಧನ

Published

on

ಬೆಂಗಳೂರು: ಕಳೆದ ತಿಂಗಳು ವಸತಿ ಸಚಿವ ಬಿ. ಝೆಡ್ ಜಮೀರ್ ಅಹ್ಮದ್ ಖಾನ್ ಅವರ ಮನೆಯಲ್ಲೇ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣದ ಕಳ್ಳತನ ನಡೆದಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರ ಮನೆಯಲ್ಲಿ 1.13 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಏಪ್ರಿಲ್ 15 ರಂದು ಸಚಿವರ ಪುಲಕೇಶಿನಗರದ ನಿವಾಸದಲ್ಲಿ ಕಳ್ಳತನ ನಡೆದಿದ್ದು, ನಂತರ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಚ್ಚರಿಯ ವಿಚಾರವೆಂದರೆ, ಹೊರಗಿನವರಾರೂ ಈ ಕೃತ್ಯ ಎಸಗಿಲ್ಲ. ಬದಲಾಗಿ ಸಚಿವರ ತಾಯಿಯ ಸ್ವಂತ ರಕ್ತಸಂಬಂಧಿಯೇ ಈ ಕಳ್ಳತನದ ಮಾಸ್ಟರ್ ಮೈಂಡ್ ಆಗಿದ್ದಾನೆ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮದುವೆ ಉಡುಗೊರೆಯಾಗಿ ಸ್ವೀಕರಿಸಿದ ಮತ್ತು ಉಳಿತಾಯದ ಮೂಲಕ ಖರೀದಿಸಿದ ಚಿನ್ನಾಭರಣಗಳನ್ನು ಕೋಣೆಯ ಕಪಾಟಿನಲ್ಲಿ ಇಡಲಾಗಿತ್ತು ಎಂದು ಸಚಿವರ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.    ಪರಿಶೀಲಿಸಿದಾಗ, ಸುಮಾರು 1 ಕೆಜಿ 300 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿರುವುದು ಕಂಡುಬಂದಿದೆ.

ಉದ್ಯಮ ನಷ್ಟ ಸರಿದೂಗಿಸಲು ಕಳ್ಳತನದ ಸ್ಕೆಚ್

ಆರೋಪಿಗಳಿಬ್ಬರೂ ಸೇರಿ ಟ್ರಾವೆಲ್ಸ್ ಬ್ಯುಸಿನೆಸ್ ನಡೆಸುತ್ತಿದ್ದರು. ಆದರೆ, ಕೋವಿಡ್-19 ಲಾಕ್‌ಡೌನ್‌ನಿಂದಾಗಿ ಇವರ ಉದ್ಯಮ ಪಾತಾಳಕ್ಕೆ ಕುಸಿದಿತ್ತು. ಆದ ನಷ್ಟವನ್ನು ಸರಿದೂಗಿಸಲು ಮತ್ತು ಸಾಲಗಾರರಿಂದ ಪಾರಾಗಲು ಹಣದ ತೀವ್ರ ಅವಶ್ಯಕತೆ ಇತ್ತು. ಎಲ್ಲಿಯೂ ಸಾಲ ಸಿಗದಿದ್ದಾಗ, ಸೈಯದ್ ತನ್ನ ಸಂಬಂಧಿಯಾದ ಸಚಿವ ಜಮೀರ್ ಮನೆಯನ್ನೇ ಟಾರ್ಗೆಟ್ ಮಾಡಿದ್ದ. ಅಲ್ಲಿಂದ ಚಿನ್ನ ಕದ್ದು, ಅದನ್ನು ಅಡವಿಟ್ಟು ಬಂದ ಹಣವನ್ನು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹೂಡಿಕೆ ಮಾಡಿ ಕೋಟ್ಯಧಿಪತಿಯಾಗುವ ದುರಾಸೆ ಈತನದ್ದಾಗಿತ್ತು

ಒಳ್ಳೆಯವನಂತೆ ನಟಿಸಿ ನಂಬಿಕೆ ದ್ರೋಹ

ಸಚಿವರ ತಾಯಿಯ ರಕ್ತಸಂಬಂಧಿ ಆಗಿದ್ದರಿಂದ ಸೈಯದ್ ಅಮೀರ್‌ಗೆ ಜಮೀರ್ ಅವರ ಮನೆಗೆ ಮುಕ್ತ ಪ್ರವೇಶವಿತ್ತು. ಪ್ರತಿದಿನ ಮನೆಗೆ ಬರುತ್ತಿದ್ದ ಈತ, ಎಲ್ಲರೊಂದಿಗೂ ಅಚ್ಚುಮೆಚ್ಚಿನವನಂತೆ ನಟಿಸುತ್ತಿದ್ದ. ಇದೇ ನಂಬಿಕೆಯನ್ನು ಬಂಡವಾಳವಾಗಿಟ್ಟುಕೊಂಡ ಈತ, 2023ನೇ ಇಸವಿಯಿಂದಲೇ ಯಾರಿಗೂ ಅನುಮಾನ ಬಾರದಂತೆ ಸ್ವಲ್ಪ ಸ್ವಲ್ಪವೇ ಚಿನ್ನಾಭರಣಗಳನ್ನು ಕದಿಯಲಾರಂಭಿಸಿದ್ದ. ಈ ರೀತಿ ಬರೋಬ್ಬರಿ 1 ಕೆಜಿ 200 ಗ್ರಾಂ ಚಿನ್ನವನ್ನು ಲಪಟಾಯಿಸಿದ್ದರು.

ಸಿಕ್ಕಿಬಿದ್ದಿದ್ದು ಹೇಗೆ?

ಮನೆಯಲ್ಲಿ ಚಿನ್ನಾಭರಣಗಳು ಕಾಣೆಯಾಗುತ್ತಿರುವ ವಿಚಾರ ಕುಟುಂಬಸ್ಥರ ಗಮನಕ್ಕೆ ಬರುತ್ತಿದ್ದಂತೆ, ಸೈಯದ್ ಅಮೀರ್ ಅಲರ್ಟ್ ಆಗಿದ್ದ. ಪ್ರತಿದಿನ ಮನೆಗೆ ಬರುತ್ತಿದ್ದವನು ದಿಢೀರ್ ಎಂದು ಬರುವುದನ್ನು ನಿಲ್ಲಿಸಿದ್ದ. ಕುಟುಂಬದವರು ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ. ಕೊನೆಗೆ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಈತನ ವರ್ತನೆಯಿಂದ ಅನುಮಾನಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಶಿವಾಜಿನಗರ ಪೊಲೀಸರು ತಾಂತ್ರಿಕ ಜಾಲದ ಮೂಲಕ ಆರೋಪಿಗಳಿಬ್ಬರನ್ನೂ ಹೆಡೆಮುರಿ ಕಟ್ಟಿ ವಿಚಾರಣೆ ನಡೆಸಿದಾಗ ಅಸಲಿ ಬಣ್ಣ ಬಯಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement