Published
2 hours agoon
By
Akkare News
ಸಚಿವ ಜಮೀರ್ ಅಹ್ಮದ್ ಖಾನ್ ಅವರ ಮನೆಯಲ್ಲಿ 1.13 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಏಪ್ರಿಲ್ 15 ರಂದು ಸಚಿವರ ಪುಲಕೇಶಿನಗರದ ನಿವಾಸದಲ್ಲಿ ಕಳ್ಳತನ ನಡೆದಿದ್ದು, ನಂತರ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅಚ್ಚರಿಯ ವಿಚಾರವೆಂದರೆ, ಹೊರಗಿನವರಾರೂ ಈ ಕೃತ್ಯ ಎಸಗಿಲ್ಲ. ಬದಲಾಗಿ ಸಚಿವರ ತಾಯಿಯ ಸ್ವಂತ ರಕ್ತಸಂಬಂಧಿಯೇ ಈ ಕಳ್ಳತನದ ಮಾಸ್ಟರ್ ಮೈಂಡ್ ಆಗಿದ್ದಾನೆ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮದುವೆ ಉಡುಗೊರೆಯಾಗಿ ಸ್ವೀಕರಿಸಿದ ಮತ್ತು ಉಳಿತಾಯದ ಮೂಲಕ ಖರೀದಿಸಿದ ಚಿನ್ನಾಭರಣಗಳನ್ನು ಕೋಣೆಯ ಕಪಾಟಿನಲ್ಲಿ ಇಡಲಾಗಿತ್ತು ಎಂದು ಸಚಿವರ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
ಪರಿಶೀಲಿಸಿದಾಗ, ಸುಮಾರು 1 ಕೆಜಿ 300 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿರುವುದು ಕಂಡುಬಂದಿದೆ.



