Published
57 minutes agoon
By
Akkare News
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಮೈಸೂರಿನ ನಿವಾಸದಲ್ಲಿ ಮಹತ್ತರ ಜನಸೇವಾ ಕಾರ್ಯವೊಂದಕ್ಕೆ ಚಾಲನೆ ನೀಡಿದರು. ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರ ಸವಿನೆನಪಿಗಾಗಿ ಆರೋಗ್ಯ ಇಲಾಖೆಗೆ ನೀಡಲಾದ ಸುಸಜ್ಜಿತ ಅಂಬುಲೆನ್ಸ್ಗಳನ್ನು ಮುಖ್ಯಮಂತ್ರಿಗಳು ಇಂದು ಜನಾರ್ಪಣೆಗೊಳಿಸಿದರು.
ಮೈಸೂರಿನ ಟಿ.ಕೆ. ಲೇಔಟ್ನಲ್ಲಿರುವ ಮುಖ್ಯಮಂತ್ರಿಗಳ ನಿವಾಸದ ಬಳಿ ಸಮತಾ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ, ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರ ಸ್ಮರಣಾರ್ಥವಾಗಿ ಎರಡು ನೂತನ ಅಂಬುಲೆನ್ಸ್ಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಪ್ರಸ್ತುತ ದಿನಗಳಲ್ಲಿ ತುರ್ತು ಚಿಕಿತ್ಸೆಗೆ ಅಂಬುಲೆನ್್ಡಗಳ ಅಗತ್ಯತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರದ ಆರೋಗ್ಯ ಇಲಾಖೆಯೊಂದಿಗೆ ಸಮತಾ ಟ್ರಸ್ಟ್ ಕೈಜೋಡಿಸಿ ಈ ವಾಹನಗಳನ್ನು ಕೊಡುಗೆಯಾಗಿ ನೀಡಿದೆ. ಈ ನೂತನ ಅಂಬುಲೆನ್ಸ್ಗಳನ್ನು ರಾಜ್ಯದ ಸರ್ಕಾರಿ ಅಂಬುಲೆನ್ಸ್ ಸೇವಾ ವ್ಯವಸ್ಥೆಯಲ್ಲಿ ವಿಲೀನಗೊಳಿಸಲಾಗಿದ್ದು, ಇವು ಸಾರ್ವಜನಿಕರಿಗೆ ನಿರಂತರವಾಗಿ ಲಭ್ಯವಿರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ತಮ್ಮ ಪುತ್ರನ ನೆನಪಿನಲ್ಲಿ ಸಮಾಜಮುಖಿ ಕೆಲಸ ಮಾಡುತ್ತಿರುವ ಟ್ರಸ್ಟ್ನ ಕಾರ್ಯವನ್ನು ಶ್ಲಾಘಿಸಿದರು.



