Connect with us

ಇತರ

ವಿಜಯ್ ರಾಜೀನಾಮೆ ನೀಡುವ ಕ್ಷೇತ್ರದಿಂದ ನಟಿ ತ್ರಿಷಾ ಸ್ಪರ್ಧೆಗೆ ಒಲವು, ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ

Published

on

ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ಆಗುತ್ತಿವೆ. ನಟ ಹಾಗೂ ರಾಜಕಾರಣಿ ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದಕ್ಕೆ ಸರ್ಕಸ್ ಮುಂದುವರಿಸಿದ್ದಾರೆ. ಈ ನಡುವೆ ವಿಜಯ್ ಅವರ ಆತ್ಮೀಯ ಗೆಳತಿ ತ್ರಿಷಾ ಅವರು ಸಹ ರಾಜಕೀಯಕ್ಕೆ ಧುಮುಕುವ ಬಗ್ಗೆ ಚರ್ಚೆ ಶುರುವಾಗಿದೆ. ದಳಪತಿ ವಿಜಯ್ ಅವರ ರಾಜಕೀಯ ಪ್ರವೇಶವು ದೇಶದಾದ್ಯಂತ ಸಂಚಲ ಸೃಷ್ಟಿ ಮಾಡಿದೆ.

ನಟ – ರಾಜಕಾರಣಿಯಾಗಿರುವ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್ ಅವರು ಮೊದಲ ಪ್ರಯತ್ನದಲ್ಲೇ ಭಾರೀ ಯಶಸ್ಸು ಕಂಡಿದ್ದಾರೆ. ಅವರು ಈ ಬಾರಿ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರು. ಎರಡೂ ವಿಧಾನಸಭಾ ಕ್ಷೇತ್ರಗಳಲ್ಲೂ ವಿಜಯ್ ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಇದೀಗ ಒಂದು ವಿಧಾನಸಭಾ ಕ್ಷೇತ್ರವನ್ನು ತ್ರಿಷಾ ಅವರಿಗೆ ಬಿಟ್ಟು ಕೊಡುವುದಕ್ಕೆ ವಿಜಯ್ ಮುಂದಾಗಿದ್ದಾರೆ ಎಂದು ನ್ಯೂಸ್ 24 ವರದಿ ಮಾಡಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಪಕ್ಷವು 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ನಟಿ ಹಾಗೂ ವಿಜಯ್ ಅವರ ಆತ್ಮೀಯ ಗೆಳತಿ ತ್ರಿಷಾ ಅವರು ವಿಜಯ್ ಅವರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ತ್ರಿಷಾ ಅವರು ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಸೇರಿ ತಮಿಳುನಾಡಿನ ತಿರುಚಿರಾಪಳ್ಳಿ ಪೂರ್ವ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಟಿವಿಕೆ ನಾಯಕರು ಉತ್ಸುಕರಾಗಿದ್ದಾರೆ ಎಂದು ಹೇಳಲಾಗಿದೆ. ತ್ರಿಷಾ ಕೃಷ್ಣನ್ ವಿಜಯ್ ಅವರ ಟಿವಿಕೆ ಪಕ್ಷ ಸೇರಲಿದ್ದಾರೆಯೇ ವಿಜಯ್ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಚೆನ್ನೈನ ಪೆರಂಬೂರು ಮತ್ತು ತಿರುಚಿರಾಪಳ್ಳಿ ಪೂರ್ವ ಎಂಬ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರು. ಎರಡೂ ವಿಧಾನಸಭಾ ಕ್ಷೇತ್ರಗಳಲ್ಲೂ ಅವರು ಗೆಲುವು ಸಾಧಿಸಿದ್ದಾರೆ. ಕಾನೂನಿನ ಪ್ರಕಾರ, ಅವರು ಎರಡೂ ಸ್ಥಾನಗಳನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ, ಅವರು 14 ದಿನಗಳಲ್ಲಿ ಒಂದು ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕು. ಇದರ ನಂತರ, ಅವರು ರಾಜೀನಾಮೆ ನೀಡುವ ವಿಧಾನಸಭಾ ಕ್ಷೇತ್ರ ಸ್ಥಾನಕ್ಕೆ ಉಪಚುನಾವಣೆ ಘೋಷಿಸಲಾಗುತ್ತದೆ.    

Continue Reading
Click to comment

Leave a Reply

Your email address will not be published. Required fields are marked *

Advertisement