Connect with us

ಇತರ

ಕೊಲ್ಯದಕಟ್ಟ ಡ್ಯಾಂನಲ್ಲಿ ದುರಂತ: ಸ್ನಾನಕ್ಕೆ ಇಳಿದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲು.ರಜೆ ದಿನದ ಮೋಜು ಕ್ಷಣಾರ್ಧದಲ್ಲಿ ಶೋಕಕ್ಕೆ; ಕುಟುಂಬಸ್ಥರ ಆಕ್ರಂದನ

Published

on

ಕಡಬ: ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹರಿಯುವ ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.

ಮೃತ ವಿದ್ಯಾರ್ಥಿನಿಯರನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ (15) ಹಾಗೂ ಸುನೀತ (21) ಎಂದು ಗುರುತಿಸಲಾಗಿದೆ.

ರಜೆ ದಿನದ ಹಿನ್ನೆಲೆಯಲ್ಲಿ ಸ್ನೇಹಿತರ ತಂಡದೊಂದಿಗೆ ಐವರು ವಿದ್ಯಾರ್ಥಿನಿಯರು ಕೊಲ್ಯದಕಟ್ಟ ಡ್ಯಾಂ ಬಳಿಗೆ ಆಗಮಿಸಿ ನೀರಿನಲ್ಲಿ ಸ್ನಾನಕ್ಕೆ ಇಳಿದಿದ್ದರು ಎನ್ನಲಾಗಿದೆ. ಈ ವೇಳೆ ಅರ್ಪಿತಾ ಹಾಗೂ ಸುನೀತ ಅವರು ನೀರಿನ ಆಳದ ಅರಿವಿಲ್ಲದೆ ಮುಂದೆ ತೆರಳಿದ್ದು, ಏಕಾಏಕಿ ಮುಳುಗತೊಡಗಿದ್ದಾರೆ. ಜೊತೆಯಲ್ಲಿದ್ದವರು ರಕ್ಷಿಸಲು ಹರಸಾಹಸಪಟ್ಟರೂ ಅವರನ್ನು ಮೇಲಕ್ಕೆತ್ತಲು ಸಾಧ್ಯವಾಗದೆ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹಗಳನ್ನು ಹೊರತೆಗೆದು ಮುಂದಿನ ಕ್ರಮ ಕೈಗೊಳ್ಳಲಾಯಿತು. ಘಟನಾ ಸ್ಥಳದಲ್ಲಿ ಮೃತ ವಿದ್ಯಾರ್ಥಿನಿಯರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ನೋವಿನ ವಾತಾವರಣ ನಿರ್ಮಾಣವಾಗಿತ್ತು. ರಜೆ ದಿನದ ಸಂತಸದ ಕ್ಷಣವೇ ಕೆಲವೇ ಹೊತ್ತಿನಲ್ಲಿ ಶೋಕ ಸಾಗರವಾಗಿ ಮಾರ್ಪಟ್ಟಿದೆ.  

  ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಪ್ರಕ್ರಿಯೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version