Connect with us

ನಿಧನ

ಸಚಿವ ಡಿ. ಸುಧಾಕರ್ ಇನ್ನಿಲ್ಲ, ಅನಾರೋಗ್ಯದಿಂದ ಬಳಲುತ್ತಿದ್ದ ಸುಧಾಕರ್ ನಿಧನ

Published

on

ಬೆಂಗಳೂರು (ಮೇ.10): ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ (Minister D Sudhakar) ಅವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ (KIMS Hospital) ಚಿಕಿತ್ಸೆ ಪಡೆಯುತ್ತಿದ್ರು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ. 
ಮಣಿಪಾಲ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 3:15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಡಿ. ಸುಧಾಕರ್ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿಯೂ ಆಗಿದ್ರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version