Published
2 hours agoon
By
Akkare News
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ.ಡಿ. ರಾಜೇಗೌಡ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು ಇದೀಗ ಆ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ.
ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಇಂದು ವಿಚಾರಣೆ ನಡೆಯಿತು. ರಾಜೇಗೌಡರ ಪರವಾಗಿ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಪ್ರಬಲವಾದ ಮಂಡಿಸಿದರು. ಚುನಾವಣಾ ಆಯೋಗದ ನಡವಳಿಕೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ಮರುಎಣಿಕೆಯ ಸಂದರ್ಭದಲ್ಲಿ ಪಾರದರ್ಶಕತೆ ಇರಲಿಲ್ಲ ಎಂದು ವಾದಿಸಿದ್ದಾರೆ. ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಮೇ 31ಕ್ಕೆ ಮುಂದೂಡಿದೆ.
ಇದರಿಂದ ಟಿ ಡಿ ರಾಜೇಗೌಡ ಅವರು ಶಾಸಕರಾಗಿ ಮುಂದುವರೆಯಲಿದ್ದಾರೆ. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ ಒಂದೇ ವಾರದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಳ್ಳುವಂತಾಗಿದೆ. ಇತ್ತೀಚೆಗಷ್ಟೇ ಅಂಚೆ ಮತಗಳ ಮರುಎಣಿಕೆಯಲ್ಲಿ ಜಯಗಳಿಸಿ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಡಿ.ಎನ್. ಜೀವರಾಜ್ ಅವರಿಗೆ ಇದು ಭಾರಿ ಹಿನ್ನಡೆಯಾಗಿದೆ.