Connect with us

ಇಂದಿನ ಕಾರ್ಯಕ್ರಮ

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಗಾಳಿ – ಮಳೆಗೆ ವಿದ್ಯುತ್ ಕಂಬಗಳಿಗೆ ಹಾನಿ… ಮೆಸ್ಕಾಂ ಅಧಿಕಾರಿಗಳಿಗೆ ದುರಸ್ತಿ ಮಾಡಲು ಸೂಚನೆ : ಶಾಸಕ ಅಶೋಕ್ ಕುಮಾರ್ ರೈ

Published

on

ಪುತ್ತೂರು: ಕಳೆದ ಮೂರು ದಿನಗಳ ಹಿಂದೆ ಪುತ್ತೂರಿನಾದ್ಯಂತ ಬೀಸಿದ ಗಾಳಿ-ಮಳೆಗೆ ಹಲವೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿ ವಿದ್ಯುತ್ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮೆಸ್ಕಾಂ ಅಧಿಕಾರಿಗಳ ಸಭೆ ಕರೆದು ಸಮರೋಪಾದಿಯಲ್ಲಿ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.
ಶಾಸಕರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಸೇರಿದಂತೆ ವಿವಿಧ ಭಾಗಗಳ ಕಿರಿಯ ಇಂಜಿನಿಯರ್‌ಗಳು ಉಪಸ್ಥಿತರಿದ್ದರು.ಗಾಳಿ ಮಳೆಯಿಂದ ಹಾನಿಗೊಳಗಾದ ಕಂಬಗಳನ್ನು ತುರ್ತಾಗಿ ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು. ಸಿಬ್ಬಂದಿಗಳ ಕೊರತೆ ಇದ್ದರೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿ ಶೀಘ್ರ ವಿದ್ಯುತ್ ಪೂರೈಕೆ ಸರಿಪಡಿಸಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version