Published
4 hours agoon
By
Akkare News

ಮೇ 12ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ ವೇಳೆ ಆರೋಪಿತೆಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಆಕೆಯ ಬಳಿ ಇದ್ದ ಸುಮಾರು 1 ಕೆಜಿ 42 ಗ್ರಾಂ ಹೈಡ್ರೊವಿಡ ಗಾಂಜಾ, ಮೊಬೈಲ್ ಫೋನ್ ಹಾಗೂ ಇತರ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿತೆ ಚೆನ್ನೈಯಿಂದ ಮಾದಕ ದ್ರವ್ಯವನ್ನು ತಂದು ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶ ಹೊಂದಿದ್ದಳು ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಮತ್ತು 20(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. 
ಇದಲ್ಲದೆ, ಆರೋಪಿತೆಯ ವಿರುದ್ಧ ಈಗಾಗಲೇ ಕಾವೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಪ್ರಕರಣ ದಾಖಲಾಗಿರುವುದಲ್ಲದೆ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ವಿಭಾಗದಲ್ಲಿಯೂ ಮಾದಕ ದ್ರವ್ಯ ಸಂಬಂಧಿತ ಪ್ರಕರಣ ದಾಖಲಾಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ.


