Connect with us

ಕ್ರೈಮ್ ನ್ಯೂಸ್

ಬಿಗ್ ನ್ಯೂಸ್… 35ಲಕ್ಷ ಮೌಲ್ಯದ ಹೈಡ್ರೋವಿಡ್ ಗಾಂಜಾ ವಶ….ಬಿ. ಸಿ. ಎ ವಿದ್ಯಾರ್ಥಿನಿ ಸುಹಾನಾ ಬಂಧನ

Published

on

ಮಂಗಳೂರು: ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯವನ್ನು ಅಕ್ರಮವಾಗಿ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿತೆಯನ್ನು ಮುಲ್ಕಿ ಪೊಲೀಸರು ಬಂಧಿಸಿ, ಸುಮಾರು ₹35 ಲಕ್ಷ ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೊವಿಡ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತೆಯನ್ನು ಸುಹಾನಾ (21) ಎಂದು ಗುರುತಿಸಲಾಗಿದೆ. ಈಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾಗಿದ್ದು, ಪ್ರಸ್ತುತ ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 12ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ ವೇಳೆ ಆರೋಪಿತೆಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಆಕೆಯ ಬಳಿ ಇದ್ದ ಸುಮಾರು 1 ಕೆಜಿ 42 ಗ್ರಾಂ ಹೈಡ್ರೊವಿಡ ಗಾಂಜಾ, ಮೊಬೈಲ್ ಫೋನ್ ಹಾಗೂ ಇತರ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿತೆ ಚೆನ್ನೈಯಿಂದ ಮಾದಕ ದ್ರವ್ಯವನ್ನು ತಂದು ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶ ಹೊಂದಿದ್ದಳು ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಮತ್ತು 20(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದಲ್ಲದೆ, ಆರೋಪಿತೆಯ ವಿರುದ್ಧ ಈಗಾಗಲೇ ಕಾವೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಪ್ರಕರಣ ದಾಖಲಾಗಿರುವುದಲ್ಲದೆ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ವಿಭಾಗದಲ್ಲಿಯೂ ಮಾದಕ ದ್ರವ್ಯ ಸಂಬಂಧಿತ ಪ್ರಕರಣ ದಾಖಲಾಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version