ಪೂರ್ವ ಮುಂಗಾರು ಬಿರುಸು ಪಡೆದುಕೊಂಡಿದ್ದು, ಬುಧವಾರ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ವೇಣೂರು, ಕಾಶಿಪಟ್ಣ, ಮುಂಡಾಜೆ, ಕಲ್ಮಂಜ, ಉಜಿರೆ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಿದೆ. ಸುಳ್ಯ, ಪುತ್ತೂರು ತಾಲೂಕಿನ ಕೆಲವು ಕಡೆಗಳಲ್ಲಿ ಸಂಜೆ ಬಳಿಕ ಮಳೆ ಸುರಿದಿದಮಂಗಳೂರಿನಲ್ಲಿ 34.8 ಡಿ. ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.9 ಡಿ. ಸೆ. ತಾಪಮಾನ ಏರಿಕೆ ಮತ್ತು 22.5 ಡಿ. ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 2.6 ಡಿ. ಸೆ. ಉಷ್ಣಾಂಶ ಇಳಿಕೆ ಕಂಡಿತ್ತು.
ಮಂಗಳೂರಿನಲ್ಲಿ ಮೇ 12ರಂದು ರಾತ್ರಿ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದ್ದು, ಕೃತಕ ನೆರೆ ಸೃಷ್ಟಿಯಾಗಿತ್ತು. ಬುಧವಾರ ಬೆಳಗ್ಗೆ ರಾಜಕಾಲುವೆ, ಸಣ್ಣ ತೋಡುಗಳ ಸ್ವತ್ಛತಾ ಕಾರ್ಯ ನಡೆಸಲಾಯಿತು. ಕೆಲವು ಕಡೆಗಳಲ್ಲಿ ಮರ ತೆರವು ಕಾರ್ಯಾಚರಣೆ ಸಾಗಿತು. ನಗರಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮ ರಾತ್ರಿಯಿಡೀ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಇಂದು ಆರೆಂಜ್ ಅಲರ್ಟ್ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಬಿರುಸಿನ ಮಳೆ ಸುರಿಯುವ ಸಾಧ್ಯತೆ ಇದ್ದು, ಮೇ 14 ಮತ್ತು 15 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ವೇಳೆ ಗಾಳಿಯ ವೇಗವೂ ಹೆಚ್ಚಿರಲಿದೆ.