ಪುತ್ತೂರು:ತಾಲ್ಲೂಕಿನ ಮಾಡ್ನೂರು ಗ್ರಾಮದ ಕಾವು ಸಮೀಪದ ಮದ್ಲದಲ್ಲಿ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ಭಾರಿ ಗಾತ್ರದ ಮರ ಮಂಗಳವಾರ ವಿದ್ಯುತ್ ಲೈನ್‌ಗೆ ಅಪ್ಪಳಿಸಿ ರಸ್ತೆಗೆ ಉರುಳಿ ಬಿದ್ದು ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಕಾವು, ಸುಳ್ಯ ಭಾಗದ ವಿದ್ಯುತ್ ಸರಬರಾಜು ವ್ಯವಸ್ಥೆ ಅಸ್ತವ್ಯಸ್ತಗೊಂಡಿತು.
ಬುಧವಾರ ಮದ್ಯಾಹ್ನದವರೆಗೆ ಕೆಲವು ಭಾಗಗಳಿಗೆ ವಿದ್ಯುತ್ ಸರಬರಾಜು ಇರಲಿಲ್ಲ. ಅರಣ್ಯ ಇಲಾಖೆ, ಮೆಸ್ಕಾಂ ಸಿಬ್ಬಂದಿ ಸ್ಥಳೀಯ ನಾಗರಿಕರ ಸಹಕಾರದೊಂದಿಗೆ ಬಿದ್ದಿದ್ದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಿದರು.