ಪುತ್ತೂರು: ಪುತ್ತೂರು-ಬೊಳುವಾರು ಎಂಬಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ ವಿದ್ಯುತ್ ಮಾರ್ಗದ ಸ್ಥಳಾಂತರ ಕಾಮಗಾರಿ ಇರುವುದರಿಂದ, ಮೇ.16ರಂದು ಪೂರ್ವಾಹ್ನ 10.೦೦ರಿಂದ ಸಾಯಂಕಾಲ 5:30 ಗಂಟೆಯವರೆಗೆ ಪುತ್ತೂರು- ಕಡಬ-ಸುಬ್ರಹ್ಮಣ್ಯ ಹಾಗೂ 33 ಕೆ.ವಿ ಪುತ್ತೂರು-ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದ್ದರಿಂದ 33/11ಕೆವಿ ಕಡಬ ವಿದ್ಯುತ್ ಉಪಕೇಂದ್ರ, 33/11ಕೆವಿ ನೆಲ್ಯಾಡಿ ವಿದ್ಯುತ್ ಉಪಕೇಂದ್ರ ಹಾಗೂ 33/11ಕೆವಿ ಸವಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಹಾಗೂ 33/11ಕೆವಿ ಬಿಂದು ವಿದ್ಯುತ್ ಉಪಕೇಂದ್ರ ರವರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.