Connect with us

ರಾಜಕೀಯ

ಕುಕ್ಕೆ ಶ್ರೀ ಕ್ಷೇತ್ರದ ಮೂಲಭೂತಸೌಕರ್ಯಗಳ ಅಭಿವೃದ್ದಿಗೆ 604.65 ಕೋಟಿ ವೆಚ್ಚದ ಮಾಸ್ಟರ್ ಪ್ಲಾನ್!

Published

on

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರತಿದಿನ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಸುಮಾರು 25 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ. ಹೀಗೆ ವಿವಿಧ ಭಾಗಗಳಿಂದ ಬರುವ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಪರಿಸರದ ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ರೂಪಿಸಿ ಮೂರು ಹಂತಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ.
ಕಳೆದ ಮೇ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನ ಸಮಗ್ರ ಅಭಿವೃದ್ಧಿಗೆ ಅನುಮೋದನೆ ನೀಡಲಾಗಿದೆ. ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರ ವಿಶೇಷ ಕಾಳಜಿ ಹಾಗೂ ಭಕ್ತರಿಗೆ ಅನುಕೂಲ ಕಲ್ಪಿಸಿ ಕೊಡಬೇಕೆಂಬ ಕಾಳಜಿಯಿಂದ ಶ್ರೀ ಕ್ಷೇತ್ರದಲ್ಲಿ ರೂ. 604.65 ಕೋಟಿ ವೆಚ್ಚದಲ್ಲಿ ಒಟ್ಟು ಒಟ್ಟು 19 ಕಾಮಗಾರಿಗಳ ನಡೆಸಲು ತೀರ್ಮಾನಿಸಲಾಗಿದೆ. ಪೆಟ್ರೋಲ್, ಡೀಸೆಲ್ ದರ ಹೆಚ್ಚಳಕ್ಕೆ ಸಿಎಂ ಖಂಡನೆ ದೇವಳದ ಸುತ್ತುಪೌಳಿ ಮರುನಿರ್ಮಾಣ. ಯಾಗಶಾಲೆಗಳು, ವಸತಿಗೃಹ ಕಟ್ಟಡಗಳು, ಡಾರ್ಮಿಟರಿ ಕಟ್ಟಡಗಳು, ಸಿಬ್ಬಂದಿಗಳ ವಾಸ್ತವ್ಯಕ್ಕಾಗಿ ವಸತಿಗೃಹ ಕಟ್ಟಡಗಳು, ಅನ್ನದಾಸೋಹ ಭವನ. ಪಾರಂಪರಿಕ ರಥಬೀದಿ ಅಭಿವೃದ್ಧಿ ವಾಣಿಜ್ಯ ಸಂಕೀರ್ಣ ಕಟ್ಟಡ ಹಾಗೂ ಆಶ್ಲೇಷಬಲಿ ಮಂಟಪ ಸೇರಿದಂತೆ ಒಟ್ಟು 19 ಕಾಮಗಾರಿಗಳ ಅಂದಾಜು ಪಟ್ಟಿ ಮತ್ತು ನಕ್ಷೆಗೆ ಕಾರ್ಯಪಾಲಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಮಂಗಳೂರು ವಿಭಾಗ, ಇವರು ತಯಾರಿಸಿರುವ ರೂ. 604.65 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿದೆ.

ಮುಜರಾಯಿ ಸಚಿವರಾದ ಶ್ರೀ ರಾಮಲಿಂಗ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 17.09.2025 ರಂದು ನಡೆದ 29, 30 ಹಾಗೂ 31ನೇ ಮಾಸ್ಟರ್ ಪ್ಲಾನ್ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಚರ್ಚಿಸಿ ತೆಗೆದುಕೊಂಡ ತೀರ್ಮಾನಗಳಂತೆ ಲೋಕೋಪಯೋಗಿ ಇಲಾಖೆಯು ಪ್ರಚಲಿತ ದರಪಟ್ಟಿಯಂತೆ ಒಟ್ಟು ರೂ. 604.65 ಕೋಟಿ ಮೊತ್ತದ ಅಂದಾಜುಪಟ್ಟಿಗಳನ್ನು ತಯಾರಿಸಿ ಸಲ್ಲಿಸಲಾಗಿತ್ತು.

Continue Reading
Click to comment

Leave a Reply

Your email address will not be published. Required fields are marked *

Advertisement