ಪುತ್ತೂರು : 2026-27ನೇ ಶೈಕ್ಷಣಿಕ ವರ್ಷದ ಆರಂಭದ ಪೂರ್ವ ಫಲವಾಗಿ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವತಿಯಿಂದ ದಿನಾಂಕ 13/05/2026 ರ ಬುಧವಾರ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ವರ್ಷಾವಧಿಯಂತೆ ರಂಗ ಪೂಜೆ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ ಶ್ರೀ ಎಸ್ ಜಯರಾಮ ಕೆದಿಲಾಯ, ಕಾರ್ಯದರ್ಶಿ ಶ್ರೀ ಕೃಷ್ಣಪ್ರಸಾದ್ ಕೆದಿಲಾಯ, ಕೋಶಾಧಿಕಾರಿ ಶ್ರೀ ಹರೀಶ್ ಪುತ್ತೂರಾಯ, ಮುಖ್ಯೋಪಾಧ್ಯಾಯರಾದ ಶ್ರೀ ಪ್ರಸನ್ನ ಕೆ ಮತ್ತು ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.