Published
19 hours agoon
By
Akkare News
ಸ್ಯಾಂಡಲ್‌ವುಡ್‌ನ ಬಹುಬೇಡಿಕೆಯ ನಟಿಯಾಗಿರುವ ರಚಿತಾ ರಾಮ್, ಈಗಾಗಲೇ ಕನ್ನಡ ಚಿತ್ರರಂಗದ ಬಹುತೇಕ ಎಲ್ಲಾ ಸೂಪರ್‌ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡು ಸೈ ಎನಿಸಿಕೊಂಡಿದ್ದಾರೆ. ತಮ್ಮ ಅದ್ಭುತ ನಟನೆ ಹಾಗೂ ಕ್ಯೂಟ್ ಡಿಂಪಲ್ ಮೂಲಕ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಇವರು, ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ಸದ್ಯ ರಚಿತಾ ರಾಮ್ ಅವರು ಧ್ರುವ ಸರ್ಜಾ ನಾಯಕತ್ವದ ಬಹುನಿರೀಕ್ಷಿತ ‘ಕ್ರಿಮಿನಲ್’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ನೀನಾಸಂ ಸತೀಶ್ ಕಾಂಬಿನೇಷನ್‌ನ ಸೂಪರ್ ಹಿಟ್ ಚಿತ್ರದ ಸೀಕ್ವೆಲ್ ‘ಅಯೋಗ್ಯ 2’ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ. ಈ ಸಿನಿಮಾಗಳ ಮೇಲಿನ ನಿರೀಕ್ಷೆ ಗಾಂಧಿನಗರದಲ್ಲಿ ಸಖತ್ ಜೋರಾಗಿದೆ. ಕನ್ನಡ ಮಾತ್ರವಲ್ಲದೆ ಪರಭಾಷೆಗಳಲ್ಲೂ ರಚಿತಾ ರಾಮ್ ತಮ್ಮ ಬ್ಯುಸಿನೆಸ್ ವಿಸ್ತರಿಸುತ್ತಿದ್ದಾರೆ. ಸದ್ಯ ತಮಿಳಿನ ದೊಡ್ಡ ನಿರ್ಮಾಣ ಸಂಸ್ಥೆಯೊಂದರ ಜೊತೆ ಅವರ ಸಿನಿಮಾದ ಮಾತುಕತೆ ಅಂತಿಮ ಹಂತದಲ್ಲಿದೆ. ಅಷ್ಟೇ ಅಲ್ಲದೆ, ತೆಲುಗು ಚಿತ್ರರಂಗದಲ್ಲೂ ಅವರು ಎರಡು ಹೊಸ ಸಿನಿಮಾಗಳಿಗೆ ಸಹಿ ಮಾಡಿದ್ದು, ಆ ಚಿತ್ರಗಳ ಅಧಿಕೃತ ಘೋಷಣೆ ಇದೇ ತಿಂಗಳಲ್ಲಿ ಹೊರಬೀಳಲಿದೆ ಎಂದು ತಿಳಿದುಬಂದಿದೆ. ಈ ಎಲ್ಲಾ ಹೊಸ ಪ್ರಾಜೆಕ್ಟ್‌ಗಳ ಯಶಸ್ಸಿಗಾಗಿ ಅವರು ದೈವದ ಆಶೀರ್ವಾದ ಪಡೆದಿದ್ದಾರೆ.