Connect with us

ಸ್ಥಳೀಯ

ಬ್ರೇಕಿಂಗ್ ನ್ಯೂಸ್ : ಕರ್ನಾಟಕದಲ್ಲಿ ಎಬೋಲಾ ಭೀತಿ: ಪೀಡಿತ ದೇಶಗಳಿಂದ ಬರುವವರಿಗೆ 21 ದಿನ ಕ್ವಾರಂಟೈನ್ ಕಡ್ಡಾಯ, ಮಾರ್ಗಸೂಚಿ ಬಿಡುಗಡೆ…

Published

on

ಬೆಂಗಳೂರು,: ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯುರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಭಾರತದಲ್ಲಿ ಇದುವರೆಗೆ ಎಬೋಲಾ ಪ್ರಕರಣ ಕಂಡುಬಂದಿಲ್ಲವಾದರೂ ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೌದು…ಎಬೋಲಾ ವೈರಸ್ ಹರಡದಂತೆ ತಡೆಯಲು ರಾಜ್ಯ ಆರೋಗ್ಯ ಇಲಾಖೆ ಇಂದು (ಮೇ 22) ಮಾರ್ಗಸೂಚಿ  ಪ್ರಕಟಿಸಿದ್ದು, ಎಬೋಲಾ ಪೀಡಿತ ದೇಶಗಳಿಂದ ಬೆಂಗಳೂರಿಗೆ ಬರುವಪ್ರಯಾಣಿಕರು ಕನಿಷ್ಠ 21 ದಿನಗಳ ಕಾಲ ಕ್ವಾರಂಟೈನ್ ಹಾಗೂ ರೋಗಲಕ್ಷಣ ಕಂಡುಬಂದ್ರೆ ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ವರದಿ ವರದಿಮಾಡಿಕೊಳ್ಳಲು ಸೂಚಚಿಸಲಾಗಿದೆ.

ಮುಖ್ಯಾಂಶಗಳು

  • ಎಬೋಲಾ ಭೀತಿ ಹಿನ್ನೆಲೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ
  • ಎಬೋಲಾ ವೈರಸ್​ಗೆ ರಾಜ್ಯದಲ್ಲಿ ಕ್ವಾರಂಟೈನ್ & ಐಸೋಲೇಷನ್
  • ಚಿಕಿತ್ಸೆಗೆ ಆಸ್ಪತ್ರೆಗಳನ್ನು ಗುರುತಿಸಿದ ರಾಜ್ಯ ಆರೋಗ್ಯ ಇಲಾಖೆ
  • ಎಬೋಲಾ ಸೋಂಕಿತ ರಾಷ್ಟ್ರಗಳಿಂದ ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಎಬೋಲಾ ಲಕ್ಷಣಗಳು

  • ತೀವ್ರ ಜ್ವರ ಮತ್ತು ತಲೆನೋವು.
  • ಸ್ನಾಯು ನೋವು ಮತ್ತು ಗಂಟಲು ನೋವು
  • ವಾಂತಿ, ಅತಿಸಾರ ಮತ್ತು ಹೊಟ್ಟೆ ನೋವು.
  • ದದ್ದುಗಳು ಹಾಗೂ ಕಣ್ಣು ಕೆಂಪಾಗುವುದು.
ಸೋಂಕಿತ ವ್ಯಕ್ತಿಯ ರಕ್ತ, ಅಂಗಾಂಗಗಳು ಅಥವಾ ದೇಹದ ದ್ರವಗಳೊಂದಿಗೆ ನೇರ ಸಂಪರ್ಕ ಹೊಂದುವುದರಿಂದ ಅಥವಾ ಕಲುಷಿತಗೊಂಡ ಬಟ್ಟೆ, ಹಾಸಿಗೆ ಮತ್ತು ಸಿರಿಂಜ್‌ಗಳ ಮೂಲಕ ಈ ರೋಗ ಹರಡುತ್ತದೆ. ಆರೋಗ್ಯ ಸಿಬ್ಬಂದಿ ಮತ್ತು ರೋಗಿಯ ಕುಟುಂಬಸ್ಥರಿಗೆ ಸೋಂಕಿನ ಅಪಾಯ ಹೆಚ್ಚಿರುತ್ತದೆ.

ಚಿಕಿತ್ಸೆಗೆ ಆಸ್ಪತ್ರೆ ಕಾಯ್ದಿರಿಸಿದ ಸರ್ಕಾರ

ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರವು ಬೆಂಗಳೂರು ಮತ್ತು ಮಂಗಳೂರಿನಲ್ಲಿ ವಿಶೇಷ ವ್ಯವಸ್ಥೆ ಮಾಡಿದೆ. ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆ (RGICD)ಯನ್ನು ಐಸೋಲೇಷನ್ ಕೇಂದ್ರವಾಗಿ ಮತ್ತು ಎಪಿಡೆಮಿಕ್ ಡಿಸೀಸ್ ಆಸ್ಪತ್ರೆಯನ್ನು ಕ್ವಾರಂಟೈನ್ ಕೇಂದ್ರವಾಗಿ ನಿಗದಿಪಡಿಸಲಾಗಿದೆ. ಇನ್ನು ಮಂಗಳೂರಿನಲ್ಲಿ ಶ್ರೀನಿವಾಸ್ ಪೋರ್ಟ್ ಆಸ್ಪತ್ರೆ (NMPA) ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆ ಮಾಡಲಾಗಿದೆ.

ವಿದೇಶದಿಂದ ಬರುವವರಿಗೆ ವಿಮಾನ ನಿಲ್ದಾಣಗಳಲ್ಲೇ ತಪಾಸಣೆ ಮಾಡಲಾಗುತ್ತಿದ್ದು, ಶಂಕಾಸ್ಪದ ಪ್ರಕರಣಗಳ ಮಾದರಿಗಳನ್ನು ಬೆಂಗಳೂರಿನ ಎನ್.ಐ.ವಿ (NIV) ಮೂಲಕ ಪುಣೆಯ ಮುಖ್ಯ ಕೇಂದ್ರಕ್ಕೆ ಪರೀಕ್ಷೆಗೆ ಕಳುಹಿಸಲಾಗುತ್ತದೆ.

ಮುಂಜಾಗ್ರತಾ ಕ್ರಮ

ಪ್ರತ್ಯೇಕ ಕ್ವಾರಂಟೈನ್, ಐಸೋಲೇಷನ್, ರೆಫರಲ್ ಌಂಬುಲೆನ್ಸ್ ವ್ಯವಸ್ಥೆ, ಪಿಪಿಇ ಕಿಟ್​ಗಳು, ಅಗತ್ಯ ಔಷಧ ಸಂಗ್ರಹ. ಱಪಿಡ್ ರೆಸ್ಪಾನ್ಸ್ ತಂಡಗಳನ್ನು ಸಕ್ರಿಯಗೊಳಿಸುವುದು, ಚಿಕಿತ್ಸೆ ನೀಡಲು ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡುವುದು ಸೇರಿದಂತೆ ಸೋಂಕು ಹರದಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮಕೈಗೊಂಡಿದೆ.

ಪ್ರಯಾಣಿಕರಿಗೆ ಸೂಚನೆ

ಸಾರ್ವಜನಿಕರು ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು ಮತ್ತು ಕೇವಲ ಅಧಿಕೃತ ಮಾಹಿತಿಗಳನ್ನು ಮಾತ್ರ ನಂಬಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ. ಎಬೋಲಾ ಪೀಡಿತ ದೇಶಗಳಿಂದ (DRC ಮತ್ತು ಉಗಾಂಡಾ) ಭಾರತಕ್ಕೆ ಮರಳಿದ ಪ್ರಯಾಣಿಕರು ಕನಿಷ್ಠ 21 ದಿನಗಳ ಕಾಲ ಆರೋಗ್ಯ ಇಲಾಖೆಯ ಮೇಲ್ವಿಚಾರಣೆಯಲ್ಲಿ ಇರಬೇಕು. ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ವರದಿ ಮಾಡಬೇಕು. ತ್ವರಿತ ಪ್ರತಿಕ್ರಿಯೆ ತಂಡಗಳನ್ನು (RRT) ಈಗಾಗಲೇ ಸಜ್ಜುಗೊಳಿಸಲಾಗಿದೆ.

ರೋಗದ ಕುರಿತು ಅರಿತುಕೊಳ್ಳಬೇಕಾದ ಮುಖ್ಯ ಅಂಶಗಳು

  • ಇಬೋಲಾವು ಜ್ವರ, ತಲೆನೋವು, ಮೈಕೈ ನೋವು, ವಾಂತಿ, ಅತಿಸಾರ ಮತ್ತು ದದ್ದುಗಳಂತಹ ಗಂಭೀರ ಲಕ್ಷಣಗಳನ್ನು ಉಂಟುಮಾಡಬಹುದು.
  •  ಇದು ಸೋಂಕಿತ ವ್ಯಕ್ತಿಯ ರಕ್ತ, ದೇಹ ದ್ರವಗಳು ಅಥವಾ ಕಲುಷಿತ ವಸ್ತುಗಳ ನೇರ ಸಂಪರ್ಕದಿಂದ ಹರಡುತ್ತದೆ.
  •  ನಮ್ಮ ಆರೋಗ್ಯ ಇಲಾಖೆಯು ವಿಮಾನ ನಿಲ್ದಾಣಗಳಲ್ಲಿ ತೀವ್ರ ನಿಗಾ ವಹಿಸಿದ್ದು, ಪ್ರತ್ಯೇಕ ಕ್ವಾರಂಟೈನ್ ಮತ್ತು ಐಸೋಲೇಷನ್ ವ್ಯವಸ್ಥೆಗಳನ್ನು ಸಜ್ಜುಗೊಳಿಸಿದೆ.
  •  ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆ ಮತ್ತು ಎಪಿಡೆಮಿಕ್ ಡಿಸೀಸ್ ಆಸ್ಪತ್ರೆ, ಹಾಗೆಯೇ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮತ್ತು ಶ್ರೀನಿವಾಸ್ ಪೋರ್ಟ್ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳನ್ನು ಸಿದ್ಧಪಡಿಸಲಾಗಿದೆ.
  •  ಇತ್ತೀಚೆಗೆ ಇಬೋಲಾ ಪೀಡಿತ ದೇಶಗಳಿಂದ ವಾಪಸಾದವರು 21 ದಿನಗಳ ಕಾಲ ಕಡ್ಡಾಯವಾಗಿ ಆರೋಗ್ಯ ನಿಗಾದಲ್ಲಿರಬೇಕು.
  • ಯಾವುದೇ ರೋಗಲಕ್ಷಣಗಳು ಕಂಡುಬಂದರೆ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ವರದಿ ಮಾಡಬೇಕು.

 

Continue Reading
Click to comment

Leave a Reply

Your email address will not be published. Required fields are marked *

Advertisement