Published
14 hours agoon
By
Akkare News
ಮಂಗಳೂರು, ಮೇ. 24. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಸ್ಟೆಲ್ ಪ್ರವೇಶಕ್ಕೆ ಸಾಕಷ್ಟು ಬೇಡಿಕೆ ಇರುವುದರಿಂದ ಹೊಸ ಹಾಸ್ಟೆಲ್ ಗಳನ್ನು ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೋ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಶಹೀದ್ ತೆಕ್ಕಿಲ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಡಾ. ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ಬಿ.ಎಸ್.ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಮತ್ತಿತರರು ಉಪಸ್ಥಿತರಿದ್ದರು.