Connect with us

ರಾಜಕೀಯ

ಸಿಎಂ ಸ್ಥಾನಕ್ಕೆ ರಾಜೀನಾಮೆಗೆ ಸಿದ್ದರಾಮಯ್ಯ ತೀರ್ಮಾನ: ನಾಳೆ ಅಧಿಕೃತ ಘೋಷಣೆ ಸಾಧ್ಯತೆ

Published

on

ಬೆಂಗಳೂರು : ತೀವ್ರ ಕುತೂಹಲ ಕೆರಳಸಿದ್ದ ಕರ್ನಾಟಕ ನಾಯಕತ್ವ ಬದಲಾವಣೆ ಗೊಂದಲಕ್ಕೆ ತೆರೆ ಬಿದ್ದಿದೆ. ದೆಹಲಿಯಲ್ಲಿ ನಡೆದ ಸರಣಿ ಸಭೆಯಲ್ಲಿ ರಾಹುಲ್ ಗಾಂಧಿ ಅವರು ನಾಯಕತ್ವ ಬದಲಾವಣೆ ಪ್ರಸ್ತಾಪ ಮಾಡಿದ್ದು, ಎರಡ್ಮೂರು ಆಫರ್ ನೀಡುವ ಮೂಲಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಹೀಗಾಗಿ ರಾಹುಲ್ ಗಾಂಧಿ ಮಾತನ್ನು ತಮ್ಮ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ಈ ವಾರದಲ್ಲೇ ಹೊಸ ಸಿಎಂ ಆಗಲಿದ್ದಾರೆ. ಇದಕ್ಕೆ ಪೂರಕವೆಂಬಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಕೆಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರು ನಾಳೆ (ಮೇ 27) ಬೆಂಗಳೂರಿಗೆ ಆಗಮಿಸಲಿದ್ದು, ಹೊಸ ಮುಖ್ಯಮಂತ್ರಿ ಜೊತೆ ಉಪಮುಖ್ಯಮಂತ್ರಿ ನೇಮಕದ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸಿದ್ದರಾಮಯ್ಯನವರು ನಾಡಿದ್ದು ಅಂದರೆ ಮೇ 28ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version