Published
14 hours agoon
By
Akkare News

ಕರ್ನಾಟಕದಲ್ಲಿ ನಾಲ್ವರು ಡಿಸಿಎಂ ಪ್ರಸ್ತುತ ಪ್ರಸ್ತಾವನೆಯಲ್ಲಿ ದಲಿತ, ಅಲ್ಪಸಂಖ್ಯಾತ, ಲಿಂಗಾಯತ ಮತ್ತು ಒಬಿಸಿ ಸಮುದಾಯಗಳಿಂದ ತಲಾ ಒಬ್ಬ ಉಪಮುಖ್ಯಮಂತ್ರಿ ಸೇರಿದ್ದಾರೆ ಎಂದು ವರದಿಯಾಗಿದೆ. ಮಾತುಕತೆಗಳು ಇನ್ನೂ ಆರಂಭಿಕ ಹಂತದಲ್ಲಿವೆ, ಇನ್ನೂ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಉಪ ಮುಖ್ಯಮಂತ್ರಿಗಳ ಆಯ್ಕೆ ಬಹುತೇಕ ಖಚಿತ ಎಂದೇ ಹೇಳಲಾಗುತ್ತಿದೆ. ಉಪ ಮುಖ್ಯಮಂತ್ರಿಗಳ ಆಕಾಂಕ್ಷಿಗಳ ಹೆಸರಿನಲ್ಲಿ ಸಚಿವ ಎಂ.ಬಿ ಪಾಟೀಲ್, ಸತೀಶ್ ಜಾರಕಿಹೊಳಿ ಹಾಗೂ ಜಿ. ಪರಮೇಶ್ವರ್ ಸೇರಿದಂತೆ ಹಲವರ ಹೆಸರು ಕೇಳಿ ಬರುತ್ತಿದೆ ಎನ್ನಲಾಗಿದೆ
ಯತೀಂದ್ರ ಸಿದ್ದರಾಮಯ್ಯಗೂ ಡಿಸಿಎಂ ಪಟ್ಟ ?
ಇನ್ನು ನಾಲ್ವರು ಉಪ ಮುಖ್ಯಮಂತ್ರಿಗಳಲ್ಲಿ ರಾಜ್ಯ ವಿಧಾನಪರಿಷತ್ತಿನ ಸದಸ್ಯ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿರಿಯ ಪುತ್ರನಿಗೂ ಉಪ ಮುಖ್ಯಮಂತ್ರಿ ಪಟ್ಟ ಸಿಗುವ ಸಾಧ್ಯತೆ ಇದೆ. ಒಂದೊಮ್ಮೆ ಸಿದ್ದಾರಾಮಯ್ಯ ಅವರು ರಾಜ್ಯಸಭೆಗೆ ಹೋಗುವುದಕ್ಕೆ ನಿರಾಕರಿಸಿದರೆ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಎಲ್ಲ ಪ್ರಶ್ನೆಗಳಿಗೂ ನಾಳೆ ಉತ್ತರ ಸಿಗಲಿದೆ. 


