Published
7 hours agoon
By
Akkare News

“ನನ್ನ ರಾಜೀನಾಮೆಯನ್ನು ಅಂಗೀಕಾರ ಮಾಡಿ ಮುಂದಿನ ಮುಖ್ಯಮಂತ್ರಿಗೆ ಆಡಳಿತ ನಡೆಸಲು ಅನುವು ಮಾಡಿಕೊಡುವುದು ರಾಜ್ಯಪಾಲರ ಜವಾಬ್ದಾರಿಯಾಗಿದೆ. ನಮ್ಮ ಪಕ್ಷ 135-1 ಸ್ಥಾನಗಳನ್ನು ಪಡೆದುಕೊಂಡಿದೆ. ಇದರ ಜೊತೆಗೆ ಇಬ್ಬರು ಪಕ್ಷೇತರ ಶಾಸಕರು ಕೂಡ ನಮ್ಮ ಜೊತೆಯಲ್ಲಿದ್ದಾರೆ. ನಾವು ರಾಜ್ಯದಲ್ಲಿ ಸಂಪೂರ್ಣ ಬಹುಮತದಲ್ಲಿದ್ದೇವೆ. ಆದ್ದರಿಂದ ಯಾವುದೇ ಗೊಂದಲವಿಲ್ಲದೆ ಮುಂದಿನ ಮುಖ್ಯಮಂತ್ರಿಗೆ ಅವಕಾಶ ನೀಡಬೇಕು” ಎಂದು ಕೋರಿದರು.
ತಮ್ಮ ಸುದೀರ್ಘ ರಾಜಕೀಯ ಪಯಣವನ್ನು ಸ್ಮರಿಸುತ್ತಾ ಭಾವುಕರಾದ ಸಿದ್ದರಾಮಯ್ಯ, “ಮೇರುನಟ ಡಾ. ರಾಜ್‌ಕುಮಾರ್ ಅವರು ಜನರನ್ನು ‘ಅಭಿಮಾನಿ ದೇವರುಗಳು’ ಎಂದು ಕರೆಯುತ್ತಿದ್ದರು. ಒಬ್ಬ ರಾಜಕಾರಣಿಯಾಗಿ ನಾನು ಕೂಡ ಸಂವಿಧಾನವೇ ನನ್ನ ಧರ್ಮ ಎಂದು ತಿಳಿದುಕೊಂಡಿದ್ದೇನೆ. ನನ್ನ ಪಾಲಿಗೆ ಈ ರಾಜ್ಯದ ಮತದಾರರೇ ಅಭಿಮಾನಿ ದೇವರುಗಳು. ನನಗೆ ರಾಜ್ಯದ ಜನತೆ ಎರಡು ಬಾರಿ ಮುಖ್ಯಮಂತ್ರಿಯಾಗುವ ಮತ್ತು ಎರಡು ಬಾರಿ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಸೇವೆ ಸಲ್ಲಿಸುವ ಐತಿಹಾಸಿಕ ಅವಕಾಶವನ್ನು ನೀಡಿದ್ದಾರೆ” ಎಂದು ಕೃತಜ್ಞತೆ ಸಲ್ಲಿಸಿದರು.


