Published
1 hour agoon
By
Akkare News
ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಈಗ ಭರ್ಜರಿ ತೆರೆ ಬಿದ್ದಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪರಮಾಪ್ತ ಗುರುಗಳಾದ ರಾಜಗುರು ದ್ವಾರಕನಾಥ್ ಗುರೂಜಿ ಅವರು ರಾಜ್ಯ ರಾಜಕೀಯದ ಭವಿಷ್ಯದ ಬಗ್ಗೆ ಅತ್ಯಂತ ಸ್ಪೋಟಕ ನುಡಿಗಳನ್ನು ಆಡಿದ್ದಾರೆ.

ಶೃಂಗೇರಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾಗಲೇ ಬಂತು ಡಿಕೆಶಿ ಫೋನ್ ಕಾಲ್! ಡಿಕೆಶಿಗೆ ಸಿಎಂ ಪಟ್ಟ ಸಿಗುವುದು ತಡವಾಗುತ್ತಿದ್ದ ಹಿನ್ನೆಲೆಯಲ್ಲಿ ತಾವು ಶೃಂಗೇರಿಗೆ ತೆರಳಿದ್ದ ರಹಸ್ಯವನ್ನು ಗುರೂಜಿ ಬಿಚ್ಚಿಟ್ಟಿದ್ದಾರೆ. “ಅವನಿಗೆ ಸಿಎಂ ಆಗೋದು ನ್ಯಾಯವಾಗಿ ಹೊಸ ವರ್ಷದ ಒಳಗೇ ಆಗಬೇಕಿತ್ತು. ಆದರೆ ನಿಧಾನವಾಗುತ್ತಿತ್ತು. ಅದಕ್ಕಾಗಿಯೇ ನಾನು ಅವನ ಪರವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಹೋಗಿದ್ದೆ. ನಾನು ಶೃಂಗೇರಿಯಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾಗಲೇ ಖುದ್ದು ಡಿ.ಕೆ. ಶಿವಕುಮಾರ್ ನನಗೆ ಫೋನ್ ಕಾಲ್ ಮಾಡಿ ‘ಗುರೂಜಿ, ಕೆಲಸ ಆಗಿದೆ’ ಎಂದು ಸಿಹಿ ಸುದ್ದಿ ನೀಡಿದ. ಸೋಮವಾರದ ಒಳಗೆ ಆತ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾನೆ” ಎಂದು ಗುರೂಜಿ ಹರ್ಷ ವ್ಯಕ್ತಪಡಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಅವರೊಂದಿಗಿನ ತಮ್ಮ 35 ವರ್ಷಗಳ ಸುದೀರ್ಘ ಒಡನಾಟವನ್ನು ನೆನಪಿಸಿಕೊಂಡ ಅವರು, “ಹಿಂದೆ ಮಾಜಿ ಸಿಎಂ ಬಂಗಾರಪ್ಪ ಅವರ ಸಂಪುಟದಲ್ಲಿ ಅತ್ಯಂತ ಸಣ್ಣ ವಯಸ್ಸಿಗೆ ಜೈಲು ಮಂತ್ರಿಯಾಗಿದ್ದಾಗಲೇ, ‘ನೀನು ಮುಂದೊಂದು ದಿನ ಈ ರಾಜ್ಯಕ್ಕೆ ಮುಖ್ಯಮಂತ್ರಿ ಆಗ್ತೀಯಾ’ ಎಂದು ಭವಿಷ್ಯ ಹೇಳಿದ್ದೆ. ಅವನು ನಮ್ಮ ಮನೆಯ ಮಗನಿದ್ದಂತೆ” ಎಂದಿದ್ದಾರೆ.


