Published
11 hours agoon
By
Akkare News
ಬೆಂಗಳೂರು, ಮೇ 29: ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಹೊಸ ಅಬಕಾರಿ ತೆರಿಗೆ ನೀತಿಯ ಲಾಭ ಗ್ರಾಹಕರಿಗೆ ಸಿಗುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣವನ್ನುಆಧರಿಸಿ ತೆರಿಗೆ ವಿಧಿಸುವ ಹೊಸ ಎಐಬಿ ತೆರಿಗೆ ಪದ್ಧತಿಯನ್ನು ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದೆ. ಅದರಂತೆ ಹೆಚ್ಚು ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ ಹೆಚ್ಚಿನ ತೆರಿಗೆ ಹಾಗೂ ಕಡಿಮೆ ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ ಕಡಿಮೆ ತೆರಿಗೆಯನ್ನು ವಿಧಿಸಲಾಗುತ್ತಿದೆ. ಈ ಹೊಸ ನೀತಿಯಿಂದಾಗಿ ಶ್ರೀಮಂತರು ಖರೀದಿಸುವ ಪ್ರೀಮಿಯಂ ವಿಸ್ಕಿ, ಜಿನ್, ಟಕೀಲಾ ಹಾಗೂ ಬಿಯರ್ ಸೇರಿದಂತೆ ಪ್ರೀಮಿಯಂ ಬ್ರ್ಯಾಂಡ್ಗಳ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. ಆದರೆ, ಬಡವರು ಮತ್ತು ಮಧ್ಯಮ ವರ್ಗದವರು ಖರೀದಿಸುವ ಸಾಮಾನ್ಯ ಮದ್ಯದ ಬ್ರ್ಯಾಂಡ್ಗಳ ದರ ದುಬಾರಿಯಾಗಿದೆ. ಆದರೆ, ಈ ಬದಲಾವಣೆಯ ನಡುವೆ ಬಾರ್ ಮತ್ತು ರೆಸ್ಟೋರೆಂಟ್ಗಳ ಮಾಲೀಕರು ಗ್ರಾಹಕರನ್ನು ಲೂಟಿ ಮಾಡುತ್ತಿದ್ದು, ಮದ್ಯಪ್ರಿಯರ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.




