Published
10 hours agoon
By
Akkare News


ನಗರದಲ್ಲಿರುವ ಮಹಿಳಾ ಪೊಲೀಸ್ ಠಾಣೆಯನ್ನು ಬೇರೆ ಜಾಗಕ್ಕೆ ಸ್ಥಳಾಂತರಿಸುವಂತೆ ತಿಳಿಸಲಾಗಿದೆ. ಈಗ ಇರುವ ಠಾಣೆಯಲ್ಲಿ ಸರಿಯಾದ ಜಾಗ ಹಾಗೂ ವ್ಯವಸ್ಥೆಗಳಿಲ್ಲ. ಮುಂದೆ ಮಹಿಳೆಯರಿಗೆ ಅನುಕೂಲವಾಗುವ ಜಾಗದಲ್ಲಿ ಠಾಣೆಯನ್ನು ಸ್ಥಾಪಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು. ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ವಿದೇಶಿ ಮಾದರಿಯಲ್ಲಿ ನಿರ್ಮಿಸಲಾಗಿದ್ದು, ಇದರಿಂದ ಇದರ ನಿರ್ವಹಣೆ ತುಂಬಾ ಕಷ್ಟವಾಗಿದೆ. ವಿದ್ಯುತ್ ಕೈಕೊಟ್ಟರೆ ಜನರೇಟರ್ಗೆ ಗಂಟೆಗೆ 50 ಲೀಟರ್ ಡಿಸೇಲ್ ಹಾಕಬೇಕು. ಈ ವಿಚಾರವನ್ನು ರಾಜ್ಯ ಸರಕಾರದ ಗಮನಕ್ಕೆ ತರಲಾಗುವುದು ಎಂದು ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು.


