ಪುತ್ತೂರು:2026-27ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭಗೊಂಡಿದ್ದು ಸಾರಿಗೆ ನಿಗಮದ ಬಸ್‌ಗಳಲ್ಲಿ ಬಸ್ ಪಾಸ್‌ಗಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ಆನ್‌ಲೈನ್ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಮೇ.29ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ.ಸೇವಾಸಿಂಧು ಪೋರ್ಟಲ್ aa URLtps://sevasindhuservices.karnataka.gov.in/busp assservices ಮೂಲಕ ಅರ್ಜಿ ಸಲ್ಲಿಸಬೇಕು.
ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳ ಮೂಲಕವೂ ಅರ್ಜಿ ಸಲ್ಲಿಸಬಹುದು.ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30 ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಲು Declaration Formಅನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ (https://ksrtc.karnataka.gov.in/studentpass) ಡೌನ್‌ಲೋಡ್ ಮಾಡಿಕೊಳ್ಳುವುದು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಗಳಿಗೆ ಅನುಕೂಲಕರವಾದ ಪಾಸ್ Submit ಮಾಡುವುದು.
ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ವಿಳಾಸದ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುವುದು.ವಿದ್ಯಾರ್ಥಿ ಪಾಸುಗಳನ್ನು ಜೂ.1ರಿಂದ ನಿಗದಿತ ಪಾಸ್ ಕೌಂಟರ್‌ಗಳಲ್ಲಿ ವಿತರಿಸಲಾಗುವುದು.ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯುವ ಅಗತ್ಯವಿದೆ. ಕರ್ನಾಟಕ ಸಾರಿಗೆ ನಿಗಮ ವ್ಯಾಪ್ತಿಯ 123 ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ :https://ksrtc.karnataka.gov.in/student ಮಾಹಿತಿ ನೀಡಲಾಗಿದೆ. ಐಟಿಐ ವಿದ್ಯಾರ್ಥಿಗಳಿಗೆ 12 ತಿಂಗಳಿಗೆ ಬಸ್‌ಪಾಸ್ ನೀಡಲಾಗುವುದು. ಉಳಿದಂತೆ ಎಲ್ಲಾ ವಿದ್ಯಾರ್ಥಿಗಳಿಗೂ 10 ತಿಂಗಳ ಅವಧಿಗೆ ಮಾತ್ರ ಪಾಸ್ ವಿತರಿಸಲಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಸಹಾಯವಾಣಿ 080-24410574 ನಂಬರನ್ನು ಸಂಪರ್ಕಿಸುವಂತೆ ಸಾರಿಗೆ ನಿಗಮದ ಪ್ರಕಟಣೆ ತಿಳಿಸಿದೆ.