Published
5 hours agoon
By
Akkare News


ದಶಕಗಳ ಕನಸು ಈಡೇರಿಕೆ: ತಾಲೂಕು ಕೇಂದ್ರವಾದ ಕಡಬದಲ್ಲಿ ನ್ಯಾಯಾಲಯವನ್ನು ಪ್ರಾರಂಭಿಸಬೇಕೆAಬ ಸ್ಥಳೀಯರ ಹಾಗೂ ನ್ಯಾಯವಾದಿಗಳ ಐದು ವರ್ಷಗಳ ನಿರಂತರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ನ್ಯಾಯಾಲಯದ ಕಾರ್ಯಕಲಾಪಗಳಿಗಾಗಿ ದೂರದ ಪುತ್ತೂರು ಹಾಗೂ ಸುಳ್ಯಕ್ಕೆ ಅಲೆಯುವುದನ್ನು ತಪ್ಪಿಸುವ ದೃಷ್ಟಿಯಿಂದ ಕಡಬ ತಾಲೂಕು ಕೇಂದ್ರದಲ್ಲಿಯೇ ನ್ಯಾಯಾಲಯ ಸ್ಥಾಪನೆಯಾಗಬೇಕು ಎಂಬ ಬೇಡಿಕೆ ಇತ್ತು. ಕಳೆದ ಎರಡು ವರ್ಷಗಳಿಂದ ಈ ಕುರಿತಾದ ಪ್ರಕ್ರಿಯೆಗಳು ನಡೆಯುತ್ತಿದ್ದು, ಈಗ ಅದಕ್ಕೆ ಅಂತಿಮ ರೂಪ ದೊರೆತಿದೆ. ಕಡಬದ ಮಿನಿ ವಿಧಾನ ಸೌಧದ ಬಳಿ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕಾಗಿ ೩ ಎಕರೆ ಜಾಗವನ್ನು ಗುರುತಿಸಲಾಗಿದೆಯಾದರೂ, ಕಟ್ಟಡ ನಿರ್ಮಾಣ ಕಾರ್ಯ ವಿಳಂಬವಾಗುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಬಾಡಿಗೆ ಕಟ್ಟಡದಲ್ಲಿ ನ್ಯಾಯಾಲಯವನ್ನು ಆರಂಭಿಸಲಾಗುತ್ತಿದೆ.
ಈಗ ಬಾಡಿಗೆ ಕಟ್ಟಡದಲ್ಲಿ ಮೂಲ ಸೌಕರ್ಯಗಳ ನವೀಕರಣ ಕಾರ್ಯ ಮುಗಿದಿದೆ. ಹೈಕೋರ್ಟ್ನಿಂದ ಸಿಗಬೆಕಾದ ಅನುಮತಿ ಕೂಡಾ ಸಿಕ್ಕಿದೆ. ಇನ್ನು ಕಡಬ ತಾಲೂಕಿನ ವ್ಯಾಪ್ತಿಗೆ ಸಂಬAಧಿಸಿದ ನ್ಯಾಯಾಲಯದ ಕಲಾಪಗಳನ್ನು ಕಡಬದಲ್ಲಿಯೇ ನಡೆಸಲಾಗುತ್ತಿದೆ. ಪ್ರಸ್ತುತ ಪುತ್ತೂರು ನ್ಯಾಯಾಲಯದಲ್ಲಿರುವ ಕಡಬ ತಾಲೂಕು ವ್ಯಾಪ್ತಿಯ ಪ್ರಕರಣಗಳ ಕಡತಗಳನ್ನು ಈಗಾಗಲೇ ಪುತ್ತೂರು ತಾಲೂಕಿನಿಂದ ಬೇರ್ಪಡಿಸಿ ಪ್ರತ್ಯೇಕಿಸಲಾಗಿದೆ ಎಂದು ತಿಳಿದು ಬಂದಿದೆ. ಹೈಕೋರ್ಟ್ ಸೂಚನೆಯಂತೆ ನವೀಕರಣ ಕಾರ್ಯ ಮುಗಿಸಲಾಗಿದ್ದು, ಕಟ್ಟಡ ಮಾಲೀಕರು ಹಾಗೂ ಜಿಲ್ಲಾಸತ್ರ ನ್ಯಾಯಾಧೀಶರ ಮಧ್ಯೆ ಒಪ್ಪಂದ ಪ್ರಕ್ರಿಯೆ ಎಲ್ಲವೂ ಮುಗಿದಿದೆ. ನ್ಯಾಯಾಲಯ ಪ್ರಾರಂಭವಾಗುವುದರಿAದ ಕಡಬ ತಾಲೂಕಿನ ಸಾರ್ವಜನಿಕರಿಗೆ ಮತ್ತು ನ್ಯಾಯವಾದಿಗಳಿಗೆ ಬಹಳಷ್ಟು ಸಮಯ ಹಾಗೂ ಹಣದ ಉಳಿತಾಯವಾಗಲಿದ್ದು, ಸ್ಥಳೀಯವಾಗಿ ಶೀಘ್ರ ನ್ಯಾಯದಾನ ದೊರೆಯಲು ಸಹಕಾರಿಯಾಗಲಿದೆ.


