Connect with us

ರಾಜಕೀಯ

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

Published

on

ಕರ್ನಾಟಕದ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ರಾಜಭವನದ ಆವರಣದಲ್ಲಿರುವ ಲೋಕಭವನದ ಗಾಜಿನ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, 64 ವರ್ಷದ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯಪಾಲರಾದ ತಾವರಚಂದ್ ಗೆಹಲೋತ್ ಅವರು ದೇವರ ಹೆಸರಿನಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು. ಇದರೊಂದಿಗೆ ರಾಜ್ಯದಲ್ಲಿ ನೂತನ ಸರ್ಕಾರದ ಅಧಿಕೃತ ಆಡಳಿತ ಪರ್ವ ಶುರುವಾಗಿದೆ.

ಮುಖ್ಯಮಂತ್ರಿಗಳ ಪ್ರಮಾಣವಚನ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ, ಕಾಂಗ್ರೆಸ್‌ನ ಹಿರಿಯ ಮುಖಂಡ ಡಾ. ಜಿ. ಪರಮೇಶ್ವರ್ ಅವರು ಪ್ರಮಾಣವಚನ ಸ್ವೀಕರಿಸಿದರು. ನಂತರ ನೂತನ ಸಚಿವ ಸಂಪುಟದ ಸದಸ್ಯರಾಗಿ ಶಾಸಕರುಗಳಾದ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಹಾಗೂ ಶರಣಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.
 
 
ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಕ್ವಿಂದರ್ ಸಿಂಗ್ ಸುಕ್ಕು ಸೇರಿದಂತೆ ಹಲವು ಗಣ್ಯ ನಾಯಕರು ಹಾಜರಿದ್ದರು. ಇದರ ಜೊತೆಗೆ ಸ್ಯಾಂಡಲ್‌ವುಡ್‌ನ ಖ್ಯಾತ ನಟರು, ವಿವಿಧ ಮಠಾಧೀಶರು, ಮುಖಂಡರು ಹಾಗೂ ಸಾವಿರಾರು ಸಂಖ್ಯೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬೃಹತ್ ಬಹುಮತದೊಂದಿಗೆ ಭರ್ಜರಿ ಜಯ ಸಾಧಿಸಿದ ಬಳಿಕ, ಹಿರಿಯ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ 3 ವರ್ಷಗಳ ಕಾಲ ಆಡಳಿತ ನಡೆಸಿದ್ದರು. ಇದೀಗ ಪಕ್ಷದ ಹೈಕಮಾಂಡ್ ತೀರ್ಮಾನದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement