Published
15 hours agoon
By
Akkare News
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಿ.ಕೆ ಶಿವಕುಮಾರ್ ಅವರು ಹಲವು ಭರ್ಜರಿ ಗುಡ್ನ್ಯೂಸ್ ಕೊಟ್ಟಿದ್ದಾರೆ. ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಹಲವು ಪ್ರಮುಖ ನಿರ್ಧಾರಗಳನ್ನು ಡಿ.ಕೆ ಶಿವಕುಮಾರ್ ಅವರು ತೆಗೆದುಕೊಂಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಡಿ.ಕೆ ಶಿವಕುಮಾರ್ ಅವರು, ನಾನು ಯಾವುದೇ ಜಾತಿ – ಧರ್ಮವನ್ನು ನೋಡಿ ರಾಜಕೀಯ ಮಾಡಲ್ಲ. ನನಗೆ ಮಾನವ ಧರ್ಮ, ಮಾನವೀಯತೆಯ ಮೇಲೆ ನಂಬಿಕೆ ಇದೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬೆನ್ನಲ್ಲೇ ರಾಜ್ಯದ ಆಸ್ತಿದಾರರಿಗೆ ಹಾಗೂ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ. ರಾಜ್ಯದ ಎಲ್ಲ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಕೊಡುವುದಾಗಿ ಘೋಷಣೆ ಮಾಡಿದ್ದಾರೆ. 


ಮೊದಲ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು ಕರ್ನಾಟಕದ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಬಿ ಖಾತಾದಿಂದ ಎ ಖಾತೆ ಪರಿವರ್ತನೆ ಯೋಜನೆ ರಾಜ್ಯದಾದ್ಯಂತ ವಿಸ್ತರಣೆ ಕರ್ನಾಟಕದ ರಸ್ತೆಗಳ ನಿರ್ಮಾಣಕ್ಕೆ 2000 ಕೋಟಿ ರೂ. ಘೋಷಣೆ 2,500 ಚದರ ಅಡಿವರೆಗೂ ಒಸಿ ವಿನಾಯಿತಿ. ಇದರೊಂದಿಗೆ 2,500 ಚ.ಅಡಿ ವಿಸ್ತೀರ್ಣ ಕಟ್ಟಡಕ್ಕೆ ಅರ್ಜಿ ಹಾಕಿದವರಿಗೆ ಬಿಗ್ ರಿಲೀಫ್.
ಪ್ರತಿ ಪಂಚಾಯತ್ಗೂ ಭಾರತ್ ಜೋಡೋ ಯುವಕ ಸಂಘ ಸ್ಥಾಪನೆಗೆ 10 ಸಾವಿರ ರೂ. ಘೋಷಣೆ. ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಹುಡುಕುತ್ತಿದ್ದವರಿಗೆ ಖಾಸಗಿ ಉದ್ಯೋಗ ವಿನಿಮಯ ಕೇಂದ್ರ ಸ್ಥಾಪನೆ. ಭಾರತ್ ಜೋಡೋ ಯುವ ಸಂಘಕ್ಕೆ 10 ಲಕ್ಷ ರೂ. 


