Published
3 hours agoon
By
Akkare News
ಬೆಂಗಳೂರು(ಜೂನ್ 05): ಗೃಹ ಸಚಿವರಾದ ಬಳಿಕ ಪ್ರಿಯಾಂಕ್ ಖರ್ಗೆ ಅವರು ಇಂದು (ಜೂನ್ 05) ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಿದರು. ಈ ವೇಳೆ ಬೆಂಗಳೂರು ಟ್ರಾಫಿಕ್ ಸಮಸ್ಯೆ, ಮಹಿಳೆಯರ ಸುರಕ್ಷತೆ ಹಾಗೂ ಡ್ರಗ್ಸ್ ಮಾಫಿಯಾ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಜೊತೆಗೆ ಕಾನೂನು ಸುವ್ಯವಸ್ಥೆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಇನ್ನು ಸಭೆ ಬಳಿಕ ಮಾತನಾಡಿದ ಖರ್ಗೆ, ಕಾನೂನು ಎಲ್ಲರಿಗೂ ಒಂದೆ. ಯಾರೇ ಇದ್ರೂ ಕಾನೂನಿನ ಚೌಕಟ್ಟಿನಲ್ಲಿದ್ರೆ ಓಕೆ. ಅದನ್ನ ಮೀರಿ ಮಾಡಿದ್ರೆ ಕ್ರಮ ಕೈಗೊಳ್ಳುವುದು ಖಚಿತ ಎಂದು ಖಡಕ್ ಎಚ್ಚರಿಕೆ ಸಂದೇಶ ನೀಡಿದ್ದಾರೆ.