Connect with us

ಹವಾಮಾನ

ಮುಂಗಾರು ಮಳೆ ಚುರುಕು, ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; 2 ದಿನ ರೆಡ್‌ ಅಲರ್ಟ್‌

Published

on

​ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು ದಕ್ಷಿಣ ಕನ್ನಡ, ಬಳ್ಳಾರಿ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಧಾರಾಕಾರ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಮನೆ, ಆಸ್ಪತ್ರೆ ಹಾಗೂ ಕಚೇರಿಗಳಿಗೆ ನೀರು ನುಗ್ಗಿ ಭಾರಿ ಅವಾಂತರ ಸೃಷ್ಟಿಯಾಗಿದೆ. ಈ ಮಧ್ಯೆ, ಕೇಂದ್ರ ಹವಾಮಾನ ಇಲಾಖೆ  ಇಡೀ ರಾಜ್ಯಕ್ಕೆ ಜೂನ್ 9 (ಮಂಗಳವಾರ) ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಿಗೆ ಮತ್ತು ಜೂನ್ 10 (ಬುಧವಾರ) ರಾಜ್ಯಾದ್ಯಂತ ರೆಡ್ ಅಲರ್ಟ್ ಘೋಷಿಸಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement