Published
1 hour agoon
By
Akkare News
ಮಂಗಳೂರು, ಜೂನ್ 08, 2026 : ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜೂನ್ 8 ರಂದು ಮಳೆಗಾಲದ ಸಿದ್ಧತೆಗಳ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಗಳು ರಸ್ತೆಯಲ್ಲಿ ನೀರು ನಿಲ್ಲುವ ಪ್ರಕರಣಗಳನ್ನು ಸಮನ್ವಯದಿಂದ ನಿರ್ವಹಿಸಬೇಕು. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ವ್ಯಾಪ್ತಿ ಮೀರಿ ಕ್ರಮ ಕೈಗೊಳ್ಳಬೇಕು ಎಂದರು.
ಮೆಸ್ಕಾಂ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ವಿದ್ಯುತ್ ಸಂಪರ್ಕ £ರ್ವಹಣೆಗೆ ಹೆಚ್ಚುವರಿ ಲೈನ್ ಮ್ಯಾನ್ ಮತ್ತು ವಾಹನಗಳನ್ನು ಒದಗಿಸಬೇಕು. ವಿದ್ಯುತ್ ಸಂಪರ್ಕ ಮರುಸ್ಥಾಪನೆಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಎಸ್ಪಿ ಡಾ ಅರುಣ್, ಡಿಸಿಎಫ್ ರವಿಶಂಕರ್, ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮೊದಲಾದವರು ಭಾಗವಹಿಸಿದ್ದರು. 


