Published
1 hour agoon
By
Akkare News
ಪುತ್ತೂರು : ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್ ಫೀಡರ್ನಲ್ಲಿ ಜೂ.11 (ಗುರುವಾರ) ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:00 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿ೦ದ110/33/11 8. ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಕೋರ್ಟ್ ರೋಡ್, ಮಿನಿ ವಿಧಾನ ಸೌಧ, ಚೇತನಾ ಹಾಸ್ಪಿಟಲ್, ಪರ್ಲಡ್ಕ, ಬೈಪಾಸ್, ಗೋಳಿಕಟ್ಟೆ, ಕುಂಜೂರು ದೇವಸ್ಥಾನ, ತೆಂಕಿಲ, ಬಪ್ಪಳಿಗೆ, ಬಾಲವನ, ಉರ್ಲಾಂಡಿ, ಸರಕಾರಿ ಆಸ್ಪತ್ರೆ, ಕರ್ಮಲ ಮತ್ತು ಬೊಳ್ವಾರು ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಕೋರಲಾಗಿದೆ. 





