Published
2 hours agoon
By
Akkare News
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಗುಂಡಿಗೆ ಬಿದ್ದು, ಬಳಿಕ ರಸ್ತೆ ಬದಿಯ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಜರುಗಿದೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಾರು ಚಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ, ಅವರು ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತ ಚಾಲಕನನ್ನು ಲಕ್ಷ್ಮೀಕಾಂತ್ ಎಂದು ಗುರುತಿಸಲಾಗಿದೆ.
ಹಾಸನ ಮೂಲದವರು: ಅಪಘಾತಕ್ಕೊಳಗಾದ ಕಾರು ಹಾಸನ ಮೂಲದ್ದಾಗಿದ್ದು, ಕಾರಿನಲ್ಲಿದ್ದವರು ಮಂಗಳೂರಿನಿಂದ ಬೆಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಕಾರು ಭಾಗಶಃ ಜಖಂಗೊಂಡಿದೆ. ಅಲ್ಲದೇ ಕಾರು ಅಪಘಾತದ ವೇಳೆ ರಸ್ತೆಯಲ್ಲಿ ಎರಡು ಸುತ್ತು ಪಲ್ಟಿ ಹೊಡೆದಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಪುತ್ತೂರು ಸಂಚಾರಿ ಠಾಣೆಯವರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.