Published
5 hours agoon
By
Akkare News
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲ ಧರ್ಮಸ್ಥಳದಲ್ಲಿ ವಿಸ್ಮಯಕಾರಿ ಘಟನೆಯೊಂದು ನಡೆದಿದೆ. ಬರೋಬ್ಬರಿ 26 ವರ್ಷಗಳ ಹಿಂದೆ 12 ವರ್ಷದ ಬಾಲಕನಾಗಿದ್ದಾಗ ಮನೆ ಬಿಟ್ಟು ನಾಪತ್ತೆಯಾಗಿದ್ದಾತ, ಇದೀಗ ಮನೆಗೆ ಮರಳಿದ್ದಾನೆ. ಧರ್ಮಸ್ಥಳದ ಅಶೋಕನಗರದ ನಿವಾಸಿಯಾಗಿದ್ದ ಸತೀಶ್ ಎಂಬಾತನೇ ಈಗ ಸಲೀಂ ಆಗಿ ಮರಳಿ ಮನೆಗೆ ಬಂದು ತಾಯಿಯನ್ನು ಸೇರಿದ ಅಪರೂಪದ ವ್ಯಕ್ತಿ. 2000ನೇ ಇಸವಿಯಲ್ಲಿ ಧರ್ಮಸ್ಥಳಕ್ಕೆ ಬಂದಿದ್ದ ಸರ್ಕಸ್ ತಂಡದೊಂದಿಗೆ ಆಕರ್ಷಿತನಾಗಿ ಓಡಿಹೋಗಿದ್ದ ಈತ, ಇಷ್ಟು ವರ್ಷಗಳ ಕಾಲ ಮಹಾರಾಷ್ಟ್ರದಲ್ಲಿ ನೆಲೆಸಿದ್ದನಂತೆ!
ಮನೆ ಬಿಟ್ಟು ಹೋದ ಬಳಿಕ ಸರ್ಕಸ್ ತಂಡದ ಜೊತೆ ದೇಶದ ವಿವಿಧೆಡೆ ಸುತ್ತಾಡಿದ ಸತೀಶ್, ಕಳೆದ 26 ವರ್ಷಗಳಿಂದ ಮಹಾರಾಷ್ಟ್ರದಲ್ಲೇ ನೆಲೆ ನಿಂತು ಕೆಲಸ ಮಾಡಿಕೊಂಡಿದ್ದ. ನಿರಂತರ ದುಡಿಮೆಯ ನಡುವೆ ಆತ ತನ್ನ ಸ್ವಂತ ಊರು, ಭಾಷೆ ಹಾಗೂ ಹೆತ್ತವರನ್ನೇ ಸಂಪೂರ್ಣವಾಗಿ ಮರೆತುಹೋಗಿದ್ದ. ಅಲ್ಲಿಯೇ ಇಸ್ಲಾಂಗೆ ಮತಾಂತರಗೊಂಡು ತನ್ನ ಹೆಸರನ್ನು ‘ಸಲೀಂ ಅಬ್ದುಲ್ ಅನ್ಸಾರಿ’ ಎಂದು ಬದಲಾಯಿಸಿಕೊಂಡಿದ್ದ. ಅಲ್ಲದೆ, ತಾಲೀಮಾ ಎಂಬಾಕೆಯನ್ನು ವಿವಾಹವಾಗಿರುವ ಈತನಿಗೆ ಈಗ ಖುಷಿ ಮತ್ತು ಅಝಂ ಎಂಬ ಇಬ್ಬರು ಮಕ್ಕಳಿದ್ದಾರೆ. ಇಷ್ಟು ವರ್ಷಗಳ ಕಾಲ ಹೊರ ರಾಜ್ಯದಲ್ಲೇ ಕಳೆದಿದ್ದರಿಂದ ಸತೀಶ್ಗೆ ತನ್ನ ಮಾತೃಭಾಷೆಯಾದ ತುಳು ಹಾಗೂ ಕನ್ನಡ ಸಂಪೂರ್ಣವಾಗಿ ಮರೆತುಹೋಗಿದ್ದು, ಈಗ ಕೇವಲ ಹಿಂದಿ ಭಾಷೆಯಲ್ಲಿ ಮಾತ್ರ ಮಾತನಾಡುತ್ತಿದ್ದಾನೆ. 
ಸತೀಶ್ಗೆ ಕೇವಲ ಹಿಂದಿ ಮಾತ್ರ ಬರುತ್ತಿದ್ದು, ಇತ್ತ ತಾಯಿಗೆ ಹಿಂದಿ ಗೊತ್ತಿಲ್ಲದ ಕಾರಣ ಇಬ್ಬರ ನಡುವೆ ಭಾಷೆಯ ಸಮಸ್ಯೆ ಎದುರಾಗಿತ್ತು. ಆದರೂ ಭಾಷೆಯ ಹಂಗಿಲ್ಲದೆ ತಾಯಿ ಮತ್ತು ಸಹೋದರರನ್ನು ಸತೀಶ್ ಗುರುತಿಸಿ ಅಪ್ಪಿಕೊಂಡಿದ್ದಾನೆ.




