Published
2 hours agoon
By
Akkare News
ಬೆಳ್ತಂಗಡಿ: ಸ್ಥಳೀಯ ಪತ್ರಿಕೋದ್ಯಮವನ್ನು ಇನ್ನಷ್ಟು ಬಲಗೊಳಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಯ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ.
ಸಂಘದ ಮುಂದಿನ ಒಂದು ವರ್ಷದ ಅವಧಿಗೆ ಎಲ್ಲಾ ಹುದ್ದೆಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಇದು ಬೆಳ್ತಂಗಡಿ ತಾಲೂಕಿನ ಪತ್ರಕರ್ತರ ಒಗ್ಗಟ್ಟಿಗೆ ಸಾಕ್ಷಿಯಾಗಿದೆ.
ತಾಲೂಕಿನ ಮೂಲೆ ಮೂಲೆಗೂ ಸಂಘವನ್ನು ಕೊಂಡೊಯ್ಯುವ ಜವಾಬ್ದಾರಿ ಹೊಂದಿದೆ. ಜಿಲ್ಲಾ ನಾಯಕರಿಂದ ಶುಭ ಹಾರೈಕೆ: ಆಯ್ಕೆ ಸಭೆಯಲ್ಲಿ ಭಾಗವಹಿಸಿದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾಧ್ಯಕ್ಷ ಈಶ್ವರ್ ವಾರಣಾಶಿ ಅವರು ಮಾತನಾಡಿ, “ಬೆಳ್ತಂಗಡಿ ಘಟಕವು ಯಾವಾಗಲೂ ಸಂಘಟನೆಯಲ್ಲಿ ಮಾದರಿಯಾಗಿದೆ. ನೂತನ ತಂಡವು ಪತ್ರಕರ್ತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಬೇಕು” ಎಂದು ಕರೆ ನೀಡಿದರು. ಪ್ರಧಾನ ಕಾರ್ಯದರ್ಶಿ ಜ್ಯೋತಿ ಪ್ರಕಾಶ್ ಅವರು ಸಹ ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ಹಾಗೂ ಅನೇಕ ಪತ್ರಕರ್ತರು ಭಾಗವಹಿಸಿದ್ದರು. 




