Connect with us

ರಾಜಕೀಯ

ಬ್ರೇಕಿಂಗ್ ನ್ಯೂಸ್: ಗ್ಯಾರಂಟಿ ಯೋಜನೆಗೆ … ಹೊಸ ಯೋಜನೆ….!!ಅನರ್ಹ ಪಲಾನುಭವಿಗಳು ಗೇಟ್ ಔಟ್….!! ಹೊಸ ಅರ್ಜಿ ಕಡ್ಡಾಯ..!!

Published

on

​‘ಗೃಹ ಲಕ್ಷ್ಮಿ’, ‘ಗೃಹ ಜ್ಯೋತಿ’ಯಿಂದ ಅನರ್ಹರ ಹೊರದಬ್ಬಲು ಕ್ರಮ * ₹ 100 ಕೋಟಿಗೂ ಹೆಚ್ಚು ಹಣ ಫಲಾನುಭವಿಗಳಲ್ಲದವರ ಪಾಲು– ಶಿವಕುಮಾರ್

ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳ ಪೈಕಿ, ಮನೆಯ ಯಜಮಾನಿಗೆ ಪ್ರತಿ ತಿಂಗಳು ₹ 2,000 ನೀಡುವ ‘ಗೃಹ ಲಕ್ಷ್ಮಿ’ ಮತ್ತು 200 ಯುನಿಟ್‌ವರೆಗೆ ಉಚಿತ ವಿದ್ಯುತ್‌ ಸೌಲಭ್ಯದ ‘ಗೃಹ ಜ್ಯೋತಿ’ಯ ಎಲ್ಲ ಫಲಾನುಭವಿಗಳಿಂದ ಹೊಸದಾಗಿ ಅರ್ಜಿ ಆಹ್ವಾನಿಸಲು ರಾಜ್ಯ ಸರ್ಕಾರ ಮುಂದಾಗಿದೆ.

 

​ಈ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ‘ಅರ್ಹ ಫಲಾನುಭವಿಗಳಿಗೆ ಯೋಜನೆಗಳು ತಲುಪಬೇಕೆಂಬ ಕಾರಣಕ್ಕೆ ಈ ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೆ, ಯೋಜನೆಯ ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡಲು ಕೂಡಾ ಉದ್ದೇಶಿಸಲಾಗಿದೆ. ಕೆಲವೇ ದಿನಗಳಲ್ಲಿ ಅರ್ಜಿ ಆಹ್ವಾನಿಸಲಾಗುವುದು’ ಎಂದರು.

​ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಎಲ್ಲ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಜೊತೆ ಶನಿವಾರ ಸುದೀರ್ಘ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ ಕೆಲವರು ನಿಧನರಾಗಿದ್ದಾರೆ. ಆದರೆ, ಅವರ ಹೆಸರಿನಲ್ಲಿ ಬೇರೆಯವರು ಹಣ ಪಡೆಯುತ್ತಿದ್ದಾರೆ. ಹೀಗೆ ₹ 100 ಕೋಟಿಗೂ ಹೆಚ್ಚು ಹಣ ಫಲಾನುಭವಿಗಳಲ್ಲದವರ ಪಾಲಾಗಿರುವುದು ಗಮನಕ್ಕೆ ಬಂದಿದೆ. ಹೀಗಾಗಿ, ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿದೆಯೇ ಇಲ್ಲವೇ ಎಂದು ಪರಿಶೀಲಿಸಿ, ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಬೇಕಾಗಿದೆ. ನಾವು ಈ ಯೋಜನೆಯನ್ನು ನಿಲ್ಲಿಸುವುದಿಲ್ಲ. ಯಾರನ್ನೂ ತೆಗೆದುಹಾಕುವ ಉದ್ದೇಶವೂ ಸರ್ಕಾರಕ್ಕೆ ಇಲ್ಲ. ಆದರೆ, ಸರಿಯಾದ ಮಾಹಿತಿ ನೀಡುವ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂಬ ಉದ್ದೇಶದಿಂದ ಎಲ್ಲ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು’ ಎಂದು ಅವರು ವಿವರಿಸಿದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version